Featured

ಬಳ್ಳಾರಿ: ಹಕ್ಕಿಜ್ವರ ಪತ್ತೆ – ಸಾವಿರಾರು ಕೋಳಿಗಳು  ಸಾವು – vishwanews24

ಬಳ್ಳಾರಿ: ಹಕ್ಕಿಜ್ವರ ಪತ್ತೆ – ಸಾವಿರಾರು ಕೋಳಿಗಳು ಸಾವು

ಬಳ್ಳಾರಿ: ಬಳ್ಳಾರಿಯ ಸಂಡೂರು ತಾಲೂಕಿನ ಕುರೇಕುಪ್ಪ ಫಾರ್ಮ್‍ನಲ್ಲಿ ಹಕ್ಕಿಜ್ವರ ಪತ್ತೆಯಾಗಿದ್ದು ಸಾವಿರಾರು ಕೋಳಿಗಳು ಸಾವನ್ನಪ್ಪಿವೆ.

ಕುರೇಕುಪ್ಪ ಜಾನುವಾರು ಸಂವರ್ಧನೆ ಮತ್ತು ತರಬೇತಿ ಕೇಂದ್ರದಲ್ಲಿನ ಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿಜ್ವರದಿಂದ 2,000 ಕೋಳಿಗಳು ಸತ್ತಿರುವುದು ದೃಢಪಟ್ಟಿದೆ. ತರಬೇತಿ ಕೇಂದ್ರದಲ್ಲಿ ರೈತರಿಗೆ ವಿತರಿಸಲು ಅಸೀಲ್ ತಳಿಯ ಕೋಳಿಗಳನ್ನು ಸಾಕಲಾಗಿತ್ತು.

ಕಳೆದ ಹತ್ತು ದಿನಗಳಿಂದ ಪ್ರತಿದಿನ ಮೂವತ್ತು ಕೋಳಿಗಳು ಸಾಯುತ್ತಿವೆ. ಕೋಳಿಗಳ ಸ್ಯಾಂಪಲ್‍ನ್ನು ಭೋಪಾಲ್‍ನಲ್ಲಿನ ಲ್ಯಾಬ್‍ಗೆ ಕಳುಹಿಸಲಾಗಿತ್ತು. ಇದೀಗ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿದೆ. ಇನ್ನೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪಶುಸಂಗೋಪನಾ ಇಲಾಖೆ ಮಾಹಿತಿ ನೀಡಿದೆ.

ಕೇಂದ್ರದ ಒಂದು ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಹಳ್ಳಿಗಳು, ಜನವಸತಿ ಪ್ರದೇಶಗಳು ಇಲ್ಲ. 10 ಕಿಮೀ ವ್ಯಾಪ್ತಿಯಲ್ಲಿ ಯಾವುದೇ ಖಾಸಗಿ ಕೋಳಿ ಫಾರ್ಮ್‍ಗಳು ಇಲ್ಲ. ಇದರಿಂದ ಹಕ್ಕಿಜ್ವರ ಬೆರೆಡೆಗೆ ಹರಡುವ ಸಾಧ್ಯತೆ ಕಡಿಮೆ ಇದೆ.

Vishwa News 24

Recent Posts

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

13 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

22 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

39 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

48 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

2 hours ago