ಗದಗ :ಬಸವ ತತ್ವಕ್ಕೆ ಮಾರುಹೋದ ಮುಸ್ಲಿಂ ಯುವಕ : ಪೀಠಾಧಿಪತಿಯಾಗಲಿದ್ದಾರೆ ದಿವಾನ್ ಶರೀಫ್​ ಮುಲ್ಲಾ -Vishwanews24

ಗದಗ: ಬಸವ ತತ್ವಕ್ಕೆ ಮಾರುಹೋಗಿರುವ ಮುಸ್ಲಿಂ ಯುವಕನೊಬ್ಬ,ಲಿಂಗದೀಕ್ಷೆ ಪಡೆದು ಶಾಖಾ ಮಠವೊಂದರ ಪೀಠಾಧಿಪತಿಯಾಗುತ್ತಿರುವ ಅಪರೂಪದ ವಿದ್ಯಮಾನಕ್ಕೆ ರೋಣ ತಾಲ್ಲೂಕಿನ ಅಸೂಟಿ ಗ್ರಾಮ ಸಾಕ್ಷಿಯಾಗುತ್ತಿದೆ.

ಗ್ರಾಮದ ದಿವಾನ್ ರೆಹಮಾನ್‌ಸಾಬ್‌ ಶರೀಫ್‌(33) ಎಂಬುವರ ಪಟ್ಟಾಧಿಕಾರ ಮಹೋತ್ಸವ ಫೆ.26ರಂದು ಗ್ರಾಮದಲ್ಲಿ ನಿಗದಿಯಾಗಿದೆ. ಬಸವ ಭಕ್ತರಾಗಿರುವ ದಿವಾನ್ ಶರೀಫ್‌ ಅವರು, ಈಗಾಗಲೇ ಗುಲ್ಬರ್ಗಾ ಜಿಲ್ಲೆ ಆಳಂದ ತಾಲ್ಲೂಕಿನ ಖಜೂರಿ ಕೋರಣೇಶ್ವರ ಮಠದ ಮುರುಘೇಂದ್ರ ಕೋರಣೇಶ್ವರ ಶ್ರೀಗಳಿಂದ ಲಿಂಗದೀಕ್ಷೆ ಪಡೆದುಕೊಂಡಿದ್ದಾರೆ.

ಪಟ್ಟಾಧಿಕಾರದ ಬಳಿಕ ದಿವಾನ್ ಶರೀಫ್‌ ಅವರು ಅಸೂಟಿ ಗ್ರಾಮದ ಖಜೂರಿ ಕೋರಣೇಶ್ವರ ಶಾಖಾ ಮಠದ ಪೀಠಾಧಿಪತಿಯಾಗಿ ಮುಂದುವರಿಯಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುರುಘರಾಜೇಂದ್ರ ಕೋರಣೇಶ್ವರ ಶ್ರೀಗಳು, ಈಗಾಗಲೇ ದಿವಾನ್‌‌ ಶರೀಫ್‌‌ ಅವರಿಗೆ ಲಿಂಗದೀಕ್ಷೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ದಿನಗಳಲ್ಲಿ ಅಸೂಟಿ ಗ್ರಾಮದ ಖಜೂರಿ ಶ್ರೀಮಠ ಮತ್ತು ಶಾಂತಿಧಾಮಕ್ಕೆ ಮುಸ್ಲಿಂ ಯುವ ದಿವಾನ್ ಶರೀಫರನ್ನು ಪೀಠಾಪತಿ ಮಾಡುವ ವಿಚಾರದ ಬಗ್ಗೆ ತಿಳಿಸಿದರು.

‘ನಮ್ಮದು ಬಸವ ತತ್ವ. ನಮ್ಮಲ್ಲಿ ಎಲ್ಲ ಧರ್ಮದವರಿಗೂ ಮುಕ್ತ ಅವಕಾಶವಿದೆ. ಇದಕ್ಕೆ ಶರೀಫ್‍ ನಮ್ಮ ಅಸೂಟಿ ಮಠದ ಪೀಠಾಧಿಪತಿಯಾಗುತ್ತಿರುವುದೇ ಸಾಕ್ಷಿ. 12ನೇ ಶತಮಾನದಲ್ಲಿ ಬಸವೇಶ್ವರರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ಸಾಗುತ್ತಾ ಬಂದಿದ್ದೇವೆ’ ಎಂದು ಖಜೂರಿಮಠದ ಮುರುಘೇಂದ್ರ ಕೋರಣೇಶ್ವರ ಶ್ರೀಗಳು ಪ್ರತಿಕ್ರಿಯಿಸಿದರು.

‘ತಂದೆಯವರ ಕಾಲದಿಂದಲೇ ನಾವು ಖಜೂರಿ ಕೋರಣೇಶ್ವರ ಮಠದ ಭಕ್ತರು. ತಂದೆಯವರು ಮಠದ ಗಿರಣಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಎರಡು ವರ್ಷಗಳ ಹಿಂದೆ ಅವರು ನಿಧನರಾದರು. ಅವರ ನಿಧನದ ನಂತರ ಮಠದ ಜತೆಗಿನ ಒಡನಾಟವನ್ನು ಹಿರಿಯ ಮಗನಾದ ನಾನು ಮುಂದುವರಿಸಿದ್ದೇನೆ. ಬಸವತತ್ವದಿಂದ ಪ್ರಭಾವಿತನಾಗಿ ಸಮಾಜಸೇವೆ ಮಾಡುವ ಉದ್ದೇಶದಿಂದ ಇತ್ತೀಚೆಗೆ ಶ್ರೀಗಳಿಂದ ಲಿಂಗದೀಕ್ಷೆಯನ್ನೂ ಪಡೆದಿದ್ದೇನೆ’ ಎಂದು ದಿವಾನ್ ಶರೀಫ್‌ ಪ್ರತಿಕ್ರಿಯಿಸಿದರು.

 

 

 

Vishwa News 24

Recent Posts

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

22 minutes ago

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ – ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ – vishwanews24

ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…

31 minutes ago

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! vishwanews24

ಉಡುಪಿ:  ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…

37 minutes ago

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

1 hour ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

2 hours ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

23 hours ago