ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಚಿಂತಾಜನಕ – Vishwanews24
ಬೆಂಗಳೂರು: ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಏಳು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರು ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ..
ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಯ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ, ದೆಹಲಿಯಲ್ಲೂ ಪ್ರತಿಭಟನೆ ಮಾಡಿದ್ದರು. ಜತೆಗೆ ಲಿಂಗಾಯತ ಪ್ರತ್ಯೇಕ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂಬ ಶಪಥ ಮಾಡಿದ್ದ ಮಾತೆ ಮಹಾದೇವಿ ಈ ಹೋರಾಟದ ಮುಂಚೂಣಿಯಲ್ಲಿದ್ದರು. ಈಗ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವುದರ ಕುರಿತು ವರದಿಯಾಗಿದೆ.
ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಏಳು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ತಜ್ಞವೈದ್ಯರ ತಂಡ ಚಿಕಿತ್ಸೆ ನೀಡುವಲ್ಲಿ ಕಾರ್ಯ ನಿರತವಾಗಿದೆ.ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು. ಆದರೆ ಈಗ ಹಿಂದೆಂಗಿಂತಲೂ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ.
“ಮಾತೆ ಮಹಾದೇವಿಗೆ ಕಿಡ್ನಿ, ಶ್ವಾಸಕೋಶ ಸೇರಿದಂತೆ ಹಲವು ಸಮಸ್ಯೆಗಳಿವೆ. ಅವರು ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಸದ್ಯ, ಅವರಿಗೆ ಐಸಿಯುನಲ್ಲಿ ಡಯಾಲಿಸೀಸ್ ನೀಡಲಾಗುತ್ತಿದೆ. ಅವ್ರ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿದೆ. ನಮ್ಮ ಯಾವುದೇ ಚಿಕಿತ್ಸೆಗೆ ಅವ್ರು ಸ್ಪಂದಿಸ್ತಿಲ್ಲ. ಸದ್ಯ ನಮ್ಮ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಆದರೆ, ಚೇತರಿಕೆ ಕಂಡು ಬರುತ್ತಿಲ್ಲ,” ಎಂದು ವೈದ್ಯ ಸುದರ್ಶನ ಬಲ್ಲಾಳ್ ಹೇಳಿದ್ದಾರೆ.
