Featured

ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಚಿಂತಾಜನಕ – Vishwanews24

ಬೆಂಗಳೂರು: ಮಣಿಪಾಲ್​ ಆಸ್ಪತ್ರೆಯಲ್ಲಿ ಕಳೆದ ಏಳು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರು ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ..

ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಯ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ, ದೆಹಲಿಯಲ್ಲೂ ಪ್ರತಿಭಟನೆ ಮಾಡಿದ್ದರು. ಜತೆಗೆ ಲಿಂಗಾಯತ ಪ್ರತ್ಯೇಕ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂಬ ಶಪಥ ಮಾಡಿದ್ದ ಮಾತೆ ಮಹಾದೇವಿ ಈ ಹೋರಾಟದ ಮುಂಚೂಣಿಯಲ್ಲಿದ್ದರು. ಈಗ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿರುವುದರ ಕುರಿತು ವರದಿಯಾಗಿದೆ.

ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಕಳೆದ ಏಳು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ತಜ್ಞವೈದ್ಯರ ತಂಡ ಚಿಕಿತ್ಸೆ ನೀಡುವಲ್ಲಿ ಕಾರ್ಯ ನಿರತವಾಗಿದೆ.ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್​ ಮಾಡಿಸಿಕೊಳ್ಳುತ್ತಿದ್ದರು. ಆದರೆ ಈಗ ಹಿಂದೆಂಗಿಂತಲೂ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ.

“ಮಾತೆ ಮಹಾದೇವಿಗೆ ಕಿಡ್ನಿ, ಶ್ವಾಸಕೋಶ ಸೇರಿದಂತೆ ಹಲವು ಸಮಸ್ಯೆಗಳಿವೆ. ಅವರು ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಸದ್ಯ, ಅವರಿಗೆ ಐಸಿಯುನಲ್ಲಿ ಡಯಾಲಿಸೀಸ್ ನೀಡಲಾಗುತ್ತಿದೆ. ಅವ್ರ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿದೆ. ನಮ್ಮ ಯಾವುದೇ ಚಿಕಿತ್ಸೆಗೆ ಅವ್ರು ಸ್ಪಂದಿಸ್ತಿಲ್ಲ. ಸದ್ಯ ನಮ್ಮ ಪ್ರಯತ್ನವನ್ನು ನಾವು ಮಾಡುತ್ತಿದ್ದೇವೆ. ಆದರೆ, ಚೇತರಿಕೆ ಕಂಡು ಬರುತ್ತಿಲ್ಲ,” ಎಂದು ವೈದ್ಯ ಸುದರ್ಶನ ಬಲ್ಲಾಳ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago