ಚೆನ್ನೈ, : ಬೆಂಗಳೂರಿನಿಂದ ಹೊರಟಿದ್ದ ಕೇರಳ ರಾಜ್ಯ ಸರ್ಕಾರಿ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಸುಮಾರು 20 ಜನರು ಮೃತಪಟ್ಟಿರುವ ಘಟನೆ ಗುರುವಾರ ತಮಿಳುನಾಡಿನ ತಿರ್ಪೂರು ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ನಡೆದಿದೆ.
ಈ ಅಪಘಾತ ಕೊಯಮತ್ತೂರು-ಸೇಲಂ ಹೆದ್ದಾರಿಯಲ್ಲಿ ಮುಂಜಾನೆ 4.30ರ ಸುಮಾರಿಗೆ ನಡೆದಿದ್ದು ಬಸ್ ಬೆಂಗಳೂರಿನಿಂದ ಕೇರಳದ ಎರ್ನಾಕುಳಂಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ತಿರ್ಪೂರು ಜಿಲ್ಲೆಯ ಅಧಿಕಾರಿಗಳು, ಬಸ್ಸಿನಲ್ಲಿದ್ದ 48 ಪ್ರಯಾಣಿಕರ ಪೈಕಿ 19 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಂದುಗಡೆಯಿಂದ ಬರುತ್ತಿದ್ದ ಲಾರಿಯ ಟೈಯರ್ ಸ್ಫೋಟಗೊಂಡ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ವೋಲ್ವೊ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದಿದ್ದಾರೆ.
ಸದ್ಯ 20 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಿರ್ಪೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಐವರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 48 ಜನರಲ್ಲಿ ಬಹುತೇಕರು ಕೇರಳದವರು ಎಂದು ತಿಳಿದುಬಂದಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…