ಬಸ್‌, ಲಾರಿ ನಡುವೆ ಭೀಕರ ಅಪಘಾತ – ಐವರು ಮಹಿಳೆಯರು ಸೇರಿ 20 ಜನರ ದುರ್ಮರಣ -Vishwanews24

ಚೆನ್ನೈ, : ಬೆಂಗಳೂರಿನಿಂದ ಹೊರಟಿದ್ದ ಕೇರಳ ರಾಜ್ಯ ಸರ್ಕಾರಿ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಸುಮಾರು 20 ಜನರು ಮೃತಪಟ್ಟಿರುವ ಘಟನೆ ಗುರುವಾರ ತಮಿಳುನಾಡಿನ ತಿರ್ಪೂರು ಜಿಲ್ಲೆಯ ಅವಿನಾಶಿ ಪಟ್ಟಣದ ಬಳಿ ನಡೆದಿದೆ.

ಈ ಅಪಘಾತ ಕೊಯಮತ್ತೂರು-ಸೇಲಂ ಹೆದ್ದಾರಿಯಲ್ಲಿ ಮುಂಜಾನೆ 4.30ರ ಸುಮಾರಿಗೆ  ನಡೆದಿದ್ದು ಬಸ್ ಬೆಂಗಳೂರಿನಿಂದ ಕೇರಳದ ಎರ್ನಾಕುಳಂಗೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ತಿರ್ಪೂರು ಜಿಲ್ಲೆಯ ಅಧಿಕಾರಿಗಳು, ಬಸ್ಸಿನಲ್ಲಿದ್ದ 48 ಪ್ರಯಾಣಿಕರ ಪೈಕಿ 19 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮುಂದುಗಡೆಯಿಂದ ಬರುತ್ತಿದ್ದ ಲಾರಿಯ ಟೈಯರ್ ಸ್ಫೋಟಗೊಂಡ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ವೋಲ್ವೊ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದಿದ್ದಾರೆ.

ಸದ್ಯ 20 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತಿರ್ಪೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ವಿವಿಧ ಖಾಸಗಿ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಐವರು ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 48 ಜನರಲ್ಲಿ ಬಹುತೇಕರು ಕೇರಳದವರು ಎಂದು ತಿಳಿದುಬಂದಿದೆ.

 

Vishwa News 24

Recent Posts

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

19 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

28 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

1 hour ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

1 hour ago