Featured

ಬಸ್‌ ಚಲಾಯಿಸುವಾಗ ಎದೆನೋವು ; ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಪ್ರಾಣಬಿಟ್ಟ KSRTC ಚಾಲಕ – vishwanews24

ಬಸ್‌ ಚಲಾಯಿಸುವಾಗ ಎದೆನೋವು ; ಬಸ್ ನಿಲ್ಲಿಸಿ ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ KSRTC ಚಾಲಕ

ನೆಲಮಂಗಲ: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ  ಟೋಲ್ ಬಳಿ ನಡೆದಿದೆ.

ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ ಮೃತ ಕೆಎಸ್‌ಆರ್‌ಟಿಸಿ ಚಾಲಕ. ಬಸ್ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ದಾವಣಗೆರೆಯ ಹರಿಹರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.

ಬೆಂಗಳೂರಿನಿಂದ ಹೊರಟ ಬಸ್ ನೆಲಮಂಗಲ ಟೋಲ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ನೋವಿನಲ್ಲಿಯೂ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಕಾಪಾಡಿದ್ದಾರೆ. ಈ ವೇಳೆ ಪ್ರಯಾಣಿಕರು 108ಗೆ ಕರೆ ಮಾಡಿ, ಆಂಬುಲೆನ್ಸ್ ಕರೆಯಿಸಿಕೊಂಡಿದ್ದಾರೆ. ದುರದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಚಾಲಕ ಸಾವನ್ನಪ್ಪಿದ್ದಾರೆ.

ನೆಲಮಂಗಲ ಸಾರ್ವಜನಿಕ ಆಸ್ಪತ್ರೆ ವೈದ್ಯರು ಸಾವನ್ನಪ್ಪಿರುವುದಾಗಿ ಧೃಡಪಡಿಸಿದ್ದು, ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಸದ್ಯ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

6 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

7 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

7 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago