ನೆಲಮಂಗಲ: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ ಮೃತ ಕೆಎಸ್‌ಆರ್‌ಟಿಸಿ ಚಾಲಕ. ಬಸ್ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ದಾವಣಗೆರೆಯ ಹರಿಹರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಬೆಂಗಳೂರಿನಿಂದ ಹೊರಟ ಬಸ್ ನೆಲಮಂಗಲ ಟೋಲ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ನೋವಿನಲ್ಲಿಯೂ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಕಾಪಾಡಿದ್ದಾರೆ. ಈ ವೇಳೆ ಪ್ರಯಾಣಿಕರು 108ಗೆ ಕರೆ ಮಾಡಿ, ಆಂಬುಲೆನ್ಸ್ ಕರೆಯಿಸಿಕೊಂಡಿದ್ದಾರೆ. ದುರದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಚಾಲಕ ಸಾವನ್ನಪ್ಪಿದ್ದಾರೆ.
ನೆಲಮಂಗಲ ಸಾರ್ವಜನಿಕ ಆಸ್ಪತ್ರೆ ವೈದ್ಯರು ಸಾವನ್ನಪ್ಪಿರುವುದಾಗಿ ಧೃಡಪಡಿಸಿದ್ದು, ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಸದ್ಯ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…