ದಾವಣಗೆರೆ,: ಕೆಎಸ್‍ಆರ್‍ಟಿಸಿ ಬಸ್ಸನ್ನು ಕೋತಿಯೊಂದು ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೆಎಸ್‍ಆರ್‍ಟಿಸಿ ಅಧಿಕಾರಿಗಳು, ಆ ಬಸ್‍ನ ಚಾಲಕನನ್ನು ಅಮಾನತು ಮಾಡಿದ್ದಾರೆ.
ದಾವಣಗೆರೆ ಕೆಎಸ್‍ಆರ್‍ಟಿಸಿ ಡಿಪೋದ ಪ್ರಕಾಶ್ ಅಮಾನತುಗೊಂಡ ಚಾಲಕ. ದಾವಣಗೆರೆ ಡಿಪೋಗೆ ಸೇರಿರುವ ಬಸ್ಸಿನಲ್ಲಿ ಅಕ್ಟೋಬರ್ 1 ರಂದು ಘಟನೆ ನಡೆದಿದೆ. ಚಾಲಕ ಪ್ರಕಾಶ್ ಅವರು ಗೇರ್ ಹಾಕಿದರೆ, ಕೋತಿ ಸ್ಟೇರಿಂಗ್ ತಿರುಗಿಸುತ್ತಿತ್ತು. ಇದನ್ನು ನೋಡುತ್ತಿದ್ದ ಪ್ರಯಾಣಿಕರಿಗೆ ಕೊಂಚ ಮನರಂಜನೆಯಾಗಿತ್ತು. ಇದನ್ನು ಪ್ರಯಾಣಿಕರೊಬ್ಬರು ಮೊಬೈಲ್‍ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದರು.
ದಾವಣಗೆರೆಯಿಂದ ಚಿತ್ರದುರ್ಗ ಜಿಲ್ಲೆಯ ಭರಮಸಾಗರ-ಆಲಿಕಲ್ಲುಗೆ ಬಸ್ ಹೊರಟಿತ್ತು. ಮಾರ್ಗ ಮಧ್ಯದಲ್ಲಿ ಕೋತಿಗೆ ಬಸ್ ಚಾಲನೆ ಮಾಡಲು ಪ್ರಕಾಶ್ ಕೊಟ್ಟಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿ ಸುಮಾರು ಪ್ರಯಾಣಿಕರಿದ್ದು, ಒಂದು ವೇಳೆ ಅನಾಹುತ ಸಂಭವಿಸಿದ್ದರೆ ಕೆಎಸ್‍ಆರ್‍ಟಿಸಿಗೆ ಭಾರೀ ನಷ್ಟವಾಗುತ್ತಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಚಾಲಕ ಪ್ರಕಾಶ್‍ನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಬೇಜವಾಬ್ದಾರಿ ಕರ್ತವ್ಯ ದೋಷಕ್ಕೆ ಕಿಡಿಕಾರಿದ್ದಾರೆ. ಬಳಿಕ ಪ್ರಕಾಶ್‍ನನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…