Featured

ಬಸ್ ಟಿಕೆಟ್ ದರ ಏರಿಕೆ : ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ – vishwanews24

ಬಸ್ ಟಿಕೆಟ್ ದರ ಏರಿಕೆ : ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಸರ್ಕಾರದ ವಿರುದ್ಧ ಆಕ್ರೋಶ..

ತಡೆಯಲು ಹೋದ ಪೊಲೀಸರಿಗೆ ಎಚ್ಚರಿಕೆ ನೀಡಿದ ಅಶೋಕ್..

ಬೆಂಗಳೂರು: ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ ಖಂಡಿಸಿ, ಬೆಂಗಳೂರಿನ  ಮೆಜೆಸ್ಟಿಕ್  ಬಸ್ ನಿಲ್ದಾಣದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್  ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಬಡವರಿಗೆ ಬಿಜೆಪಿ ಫ್ರೀ ಕೊಟ್ಟಿರಲಿಲ್ಲ. ಕಾಂಗ್ರೆಸ್ ಫ್ರೀ ಕೊಟ್ಟು ದರ ಏರಿಕೆ ಮಾಡಿದೆ. ಹಾಲಿನಲ್ಲಿ ಕಲ್ಲು ಹಾಕಿದ ದುರುಳರು ಇವರು. ಮದ್ಯದ ದರವೂ ಏರಿಕೆ ಮಾಡಿದ್ದೀರಿ. ವಿದ್ಯುತ್, ನೋಂದಣಿ ದರವೂ ಏರಿಕೆ ಮಾಡಿದ್ದೀರಿ. ಈ ಸರ್ಕಾರ ಎಲ್ಲದಕ್ಕೂ ಟ್ಯಾಕ್ಸ್ ಹಾಕಿದೆ. ಬಸ್ ದರ ಏರಿಕೆ ಮೂಲಕ ಬಡ ಜನರಿಗೆ ಸಿಎಂ ಒಳ್ಳೆದು ಮಾಡಿದ್ದಾರೆ. ನಾವು ಪ್ರಯಾಣಿಕರಿಗೆ ಗುಲಾಬಿ ಕೊಡುತ್ತೇವೆ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಗುಲಾಬಿ ಕೊಡುತ್ತೇವೆ. ಕಂದಾಯ, ಮನೆ ಬಾಡಿಗೆ ಎಲ್ಲವೂ ದರ ಏರಿಕೆಯಾಗಿದೆ. ನಾನು ಸಾರಿಗೆ ಸಚಿವ ಇದ್ದಾಗ 1 ಸಾವಿರ ಕೋಟಿ ಲಾಭ ಇತ್ತು ಎಂದು ವಾಗ್ದಾಳಿ ನಡೆಸಿದರು.

ಇನ್ನು ಇದೇ ವೇಳೆ ಪ್ರಯಾಣಿಕರಿಗೆ ಹೂ ಕೊಡಲು ಹೋದಾಗ ಅಶೋಕ್ ಅವರನ್ನು ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಅಶೋಕ್ ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪೊಲೀಸ್ ದೌರ್ಜನ್ಯ ಬೇಡ. ರೈಟಿಂಗ್‌ನಲ್ಲಿ ಪ್ರತಿಭಟನೆ ಮಾಡಬಾರದು ಎಂದು ಕೊಡಿ. ಸರ್ಕಾರ ಇದೇ ಇರೋದಿಲ್ಲ. ನಾಟಕ ಆಡುತ್ತಿದ್ದೀರಾ ನೀವು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಅಶೋಕ್ ಜೊತೆ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago