ಬೆಂಗಳೂರು: ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ ಖಂಡಿಸಿ, ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಬಡವರಿಗೆ ಬಿಜೆಪಿ ಫ್ರೀ ಕೊಟ್ಟಿರಲಿಲ್ಲ. ಕಾಂಗ್ರೆಸ್ ಫ್ರೀ ಕೊಟ್ಟು ದರ ಏರಿಕೆ ಮಾಡಿದೆ. ಹಾಲಿನಲ್ಲಿ ಕಲ್ಲು ಹಾಕಿದ ದುರುಳರು ಇವರು. ಮದ್ಯದ ದರವೂ ಏರಿಕೆ ಮಾಡಿದ್ದೀರಿ. ವಿದ್ಯುತ್, ನೋಂದಣಿ ದರವೂ ಏರಿಕೆ ಮಾಡಿದ್ದೀರಿ. ಈ ಸರ್ಕಾರ ಎಲ್ಲದಕ್ಕೂ ಟ್ಯಾಕ್ಸ್ ಹಾಕಿದೆ. ಬಸ್ ದರ ಏರಿಕೆ ಮೂಲಕ ಬಡ ಜನರಿಗೆ ಸಿಎಂ ಒಳ್ಳೆದು ಮಾಡಿದ್ದಾರೆ. ನಾವು ಪ್ರಯಾಣಿಕರಿಗೆ ಗುಲಾಬಿ ಕೊಡುತ್ತೇವೆ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಗುಲಾಬಿ ಕೊಡುತ್ತೇವೆ. ಕಂದಾಯ, ಮನೆ ಬಾಡಿಗೆ ಎಲ್ಲವೂ ದರ ಏರಿಕೆಯಾಗಿದೆ. ನಾನು ಸಾರಿಗೆ ಸಚಿವ ಇದ್ದಾಗ 1 ಸಾವಿರ ಕೋಟಿ ಲಾಭ ಇತ್ತು ಎಂದು ವಾಗ್ದಾಳಿ ನಡೆಸಿದರು.
ಇನ್ನು ಇದೇ ವೇಳೆ ಪ್ರಯಾಣಿಕರಿಗೆ ಹೂ ಕೊಡಲು ಹೋದಾಗ ಅಶೋಕ್ ಅವರನ್ನು ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಅಶೋಕ್ ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪೊಲೀಸ್ ದೌರ್ಜನ್ಯ ಬೇಡ. ರೈಟಿಂಗ್‌ನಲ್ಲಿ ಪ್ರತಿಭಟನೆ ಮಾಡಬಾರದು ಎಂದು ಕೊಡಿ. ಸರ್ಕಾರ ಇದೇ ಇರೋದಿಲ್ಲ. ನಾಟಕ ಆಡುತ್ತಿದ್ದೀರಾ ನೀವು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಅಶೋಕ್ ಜೊತೆ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…