ಚೆನ್ನೈ: ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ರಭಸಕ್ಕೆ ಸವಾರರು ಸುಮಾರು ಮೀಟರ್ ದೂರಕ್ಕೆ ಬಿದ್ದರೂ ಬದುಕುಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಮಧುರೈನಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಮೂರು ರಸ್ತೆಗಳು ಸೇರುವ ವೃತ್ತದ ಒಂದು ಕಡೆಯಿಂದ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಬರುತ್ತಿತ್ತು. ಅದರ ಎಡ ಭಾಗದ ರಸ್ತೆಯಿಂದ ಬೈಕ್‍ನಲ್ಲಿ ಮೂವರು ಸವಾರರು ಬಂದಿದ್ದಾರೆ. ವೇಗವಾಗಿದ್ದ ಇಬ್ಬರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿದ್ದ ಮೂವರು ಸವಾರರು ಬೈಕ್ ಸಮೇತ ಸುಮಾರು ದೂರಕ್ಕೆ ಹಾರಿ ಬಿದ್ದಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ, ಬಸ್ಸನ್ನು ನಿಯಂತ್ರಕ್ಕೆ ತಂದಿದ್ದಾನೆ. ತಕ್ಷಣವೇ ಕೆಳಗೆ ಇಳಿದು ಬಂದ ಪ್ರಯಾಣಿಕರು, ಬಸ್ ಅಡಿಗೆ ಹಾಗೂ ರಸ್ತೆ ಮೇಲೆ ಬಿದ್ದಿದ್ದ ಸವಾರರನ್ನು ಹೊರಕ್ಕೆ ಎಳೆದು, ಆರೈಕೆ ಮಾಡಿದ್ದಾರೆ. ಬಳಿಕ ಸಣ್ಣ ಪುಟ್ಟ ಗಾಯಗಳಾಗಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸವಾರರ ಬೇಜವಾಬ್ದಾರಿಯಿಂದಲೇ ಈ ಅವಘಡ ಸಂಭವಿಸಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…