ಮಂಗಳೂರು: ನನಗೆ ಮುಸ್ಲಿಮರ ಮತಗಳು ಬೇಡ, ಹಿಂದೂಗಳ ಮತಗಳಷ್ಟೇ ಸಾಕು ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಸ್ಪರ್ಧಿಸಲು ಸಂಘದ ಹಿರಿಯರು ಸೂಚಿಸಿದ್ರೆ ಸ್ಪರ್ಧೆ ಮಾಡುತ್ತೇನೆ. ಆದರೆ ಆಗ ತಾಕತ್ತಿನಿಂದ ಹೇಳ್ತೇನೆ, ನನಗೆ ಮುಸ್ಲಿಮರ ವೋಟ್ ಬೇಡ. ನನಗೆ ಕೇವಲ ಹಿಂದೂಗಳ ವೋಟ್ ಅಷ್ಟೇ ಸಾಕು. ಯಾಕೆಂದರೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಆಗಬೇಕು. ಕಾಶಿಯಲ್ಲಿ ವಿಶ್ವನಾಥ ದೇವರ ಮಂದಿರ ನಿರ್ಮಾಣ ಆಗಬೇಕು. ದತ್ತ ಪೀಠದಲ್ಲಿ ದತ್ತಾತ್ರೇಯರ ಪೀಠ ನಿರ್ಮಾಣ ಆಗಬೇಕು. ಹೀಗಾಗಿ ಬಹಳ ಧೈರ್ಯದಿಂದ ಹೇಳ್ತೇನೆ ನನಗೆ ಮುಸ್ಲಿಮರ ಮತಗಳು ಬೇಡ ಎಂದು ತುಳು ಭಾಷೆಯಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಗುಡುಗಿದ್ದಾರೆ.
ಕಾಂಗ್ರೆಸ್ ಕುಮ್ಮಕ್ಕಿನಿಂದ ಹಿಂದೂ ಕಾರ್ಯಕರ್ತ ಹತ್ಯೆ ಆಗಿದೆ. ಕೆಂಪುಕೋಟೆ ಮೇಲೆ ಭಗವಾದ್ವಜ ಹಾರಿಸ್ತೀವಿ ಎಂದು ಹೇಳಿರುವ ಭಾಷಣದ ತುಣುಕುಗಳು ಭಾರೀ ವೈರಲ್ ಆಗಿದೆ. ಇದೀಗ ಈ ಹೇಳಿಕೆ ಮುಂದಿನ ಚುನಾವಣೆಯಲ್ಲಿ ಅವರ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಬಗ್ಗೆ ಮಾತುಗಳು ಕೇಳಿಬರುತ್ತಿದೆ.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…