ಬೆಂಗಳೂರು, : ಹಲಾಲ್ ಹೂಡಿಕೆ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಹೊಸದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ದುಬೈನಲ್ಲಿ ತಲೆಮರೆಸಿಕೊಂಡಿದ್ದ ಮನ್ಸೂರ್ ಖಾನ್ ಭಾರತಕ್ಕೆ ಆಗಮಿಸುತ್ತಿರುವ ಖಚಿತ ಮಾಹಿತಿನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯರಾತ್ರಿ 1.50 ಕ್ಕೆ ಮನ್ಸೂರ್ನನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಆತನನ್ನು ವಶಕ್ಕೆ ತೆಗೆದುಕೊಂಡು ರಕ್ಷಣೆ ನೀಡಿರುವ ಎಸ್‌ಐಟಿ ತಂಡ ದಿಲ್ಲಿಯಲ್ಲೇ ಬೀಡು ಬಿಟ್ಟಿದೆ. ಸದ್ಯ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿರುವ ಎಸ್‌ಐಟಿ ಶೀಘ್ರವೇ ಆತನನ್ನು ಬೆಂಗಳೂರಿಗೆ ಕರೆ ತರುವ ನಿರೀಕ್ಷೆಯಿದೆ. ಎಸ್ಐಟಿ ಮನ್ಸೂರ್ ಖಾನ್ ವಿರುದ್ಧ ಲುಕ್ ಔಟ್ ಸರ್ಕ್ಯೂಲರ್ ಹೊರಡಿಸಿತ್ತು.
ದುಬೈನಲ್ಲಿ ಅಡಗಿಕೊಂಡು ಅಲ್ಲಿಂದಲೇ ವೀಡಿಯೊ ಸಂದೇಶಗಳನ್ನು ಬಿಡುಗಡೆ ಮಾಡುತ್ತಿದ್ದ ಮನ್ಸೂರ್, ತನಗೆ ರಕ್ಷಣೆ ನೀಡುವುದಾದಲ್ಲಿ 24 ಗಂಟೆಯೊಳಗೆ ಭಾರತಕ್ಕೆ ವಾಪಸ್ ಬರುವುದಾಗಿ ಮೊನ್ನೆಯಷ್ಟೇ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದ. ಅದರಂತೆ, ರಕ್ಷಣೆ ಕೊಡುತ್ತೇವೆ ಎಂದು ಆತನಿಗೆ ಭರವಸೆ ನೀಡಿ ಭಾರತಕ್ಕೆ ಬರಲು ಸಿಟ್ ಸೂಚಿಸಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…