Featured

ಬಹುಕೋಟಿ ವಂಚನೆ ಪ್ರಕರಣ – ಐಎಂಎ ಕಂಪನಿ ಮಾಲೀಕ ಮನ್ಸೂರ್​ ಖಾನ್​ ಬಂಧನ -Vishwanews24

ಬೆಂಗಳೂರು, : ಹಲಾಲ್ ಹೂಡಿಕೆ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ನನ್ನು ಹೊಸದಿಲ್ಲಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ದುಬೈನಲ್ಲಿ ತಲೆಮರೆಸಿಕೊಂಡಿದ್ದ ಮನ್ಸೂರ್​ ಖಾನ್​ ಭಾರತಕ್ಕೆ ಆಗಮಿಸುತ್ತಿರುವ ಖಚಿತ ಮಾಹಿತಿನ್ನು ಆಧರಿಸಿ ಎಸ್​ಐಟಿ ಅಧಿಕಾರಿಗಳು ಗುರುವಾರ ಮಧ್ಯರಾತ್ರಿ 1.50 ಕ್ಕೆ ಮನ್ಸೂರ್​ನನ್ನು ವಶಕ್ಕೆ ಪಡೆದಿದ್ದಾರೆ.

ಸದ್ಯ ಆತನನ್ನು ವಶಕ್ಕೆ ತೆಗೆದುಕೊಂಡು ರಕ್ಷಣೆ ನೀಡಿರುವ ಎಸ್‌ಐಟಿ ತಂಡ ದಿಲ್ಲಿಯಲ್ಲೇ ಬೀಡು ಬಿಟ್ಟಿದೆ. ಸದ್ಯ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿರುವ ಎಸ್‌ಐಟಿ ಶೀಘ್ರವೇ ಆತನನ್ನು ಬೆಂಗಳೂರಿಗೆ ಕರೆ ತರುವ ನಿರೀಕ್ಷೆಯಿದೆ. ಎಸ್ಐಟಿ ಮನ್ಸೂರ್ ಖಾನ್ ವಿರುದ್ಧ ಲುಕ್ ಔಟ್ ಸರ್ಕ್ಯೂಲರ್ ಹೊರಡಿಸಿತ್ತು.

ದುಬೈನಲ್ಲಿ ಅಡಗಿಕೊಂಡು ಅಲ್ಲಿಂದಲೇ ವೀಡಿಯೊ ಸಂದೇಶಗಳನ್ನು ಬಿಡುಗಡೆ ಮಾಡುತ್ತಿದ್ದ ಮನ್ಸೂರ್, ತನಗೆ ರಕ್ಷಣೆ ನೀಡುವುದಾದಲ್ಲಿ 24 ಗಂಟೆಯೊಳಗೆ ಭಾರತಕ್ಕೆ ವಾಪಸ್ ಬರುವುದಾಗಿ ಮೊನ್ನೆಯಷ್ಟೇ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದ. ಅದರಂತೆ, ರಕ್ಷಣೆ ಕೊಡುತ್ತೇವೆ ಎಂದು ಆತನಿಗೆ ಭರವಸೆ ನೀಡಿ ಭಾರತಕ್ಕೆ ಬರಲು ಸಿಟ್ ಸೂಚಿಸಿತ್ತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago