ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಇದು ಹೆಚ್ಚು ಕಡಿಮೆ 14 ವಾಹಿನಿಗಳು ನಡೆಸಿದ ಮತಗಟ್ಟೆ ಸಮೀಕ್ಷೆಯ ಫಲಿತಾಂಶದ ಸಾರಾಂಶ. ಬಹುತೇಕ ಎಲ್ಲ ಸಮೀಕ್ಷೆಗಳ ಪ್ರಕಾರ, ಕೇಂದ್ರದಲ್ಲಿ ಮತ್ತೆ ಮೋದಿ ಅವರ ಸರಕಾರವೇ ಸ್ಥಾಪಿತಗೊಳ್ಳಲಿದೆ. ಕಳೆದ ಬಾರಿಯಂತೆಯೇ ಸುಮಾರು 300 ಸೀಟುಗಳನ್ನು ಎನ್‌ಡಿಎ ಗೆಲ್ಲಲಿದೆ. ಕರ್ನಾಟಕದಲ್ಲೂ ಬಿಜೆಪಿ ತನ್ನ ಕರಾಮತ್ತು ತೋರಿಸಲಿದ್ದು, ಹೆಚ್ಚು ಕಡಿಮೆ 20 ಸೀಟುಗಳಲ್ಲಿ ಜಯ ಸಾಧಿಸಲಿದೆ ಎಂದು ಈ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಟೈಮ್ಸ್ ನೌ – ವಿಎಂಆರ್ ಸಮೀಕ್ಷೆ ಪ್ರಕಾರ 542 ಸೀಟುಗಳಲ್ಲಿ ಎನ್‌ಡಿಎ 300 ಸೀಟು ಗಳಿಸಲಿದೆ. ರಿಪಬ್ಲಿಕ್ ಟಿವಿ – ಸಿವೋಟರ್ ಸಮೀಕ್ಷೆ ಪ್ರಕಾರ ಬಿಜೆಪಿ ನೇತತ್ವದ ಪಕ್ಷಗಳು 287 ಸೀಟುಗಳನ್ನು ಗೆಲ್ಲಲಿವೆ. ಅದೇ ವೇಳೆ ರಿಪಬ್ಲಿಕ್ -ಜನ್ ಕೀ ಬಾತ್ ಸಮೀಕ್ಷೆ ಪ್ರಕಾರ ಎನ್‌ಡಿಎ 305 ಸೀಟು ಮತ್ತು ನ್ಯೂಸ್ ನೇಷನ್ ಸಮೀಕ್ಷೆ ಪ್ರಕಾರ ಎನ್‌ಡಿಎ 282- 290 ಸೀಟುಗಳನ್ನು ಗಳಿಸಲಿದೆ.
ಕೇಂದ್ರದಲ್ಲಿ ಸರ್ಕಾರ ರಚಿಸಲು ಯಾವುದೇ ಪಕ್ಷ ಅಥವಾ ಮೈತ್ರಿಕೂಟಕ್ಕೆ 272 ಸೀಟುಗಳು ಬೇಕು.
2014ರಲ್ಲಿ ಎನ್‌ಡಿಎ 336 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೇರಿತ್ತು. ಮೋದಿ ನೇತೃತ್ವದ ಬಿಜೆಪಿ 282 ಸೀಟುಗಳನ್ನು ಗಳಿಸಿತ್ತು. ಏತನ್ಮಧ್ಯೆ, ಮೂರು ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ನೇತೃತ್ವದ ಯುಪಿಎಗೆ 124- 128 ಸೀಟುಗಳು ಲಭಿಸಲಿವೆ ಎಂದಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…