ಸಮ್ಮಿಶ್ರ ಸರ್ಕಾರದ ಆಯಸ್ಸು ಕೇವಲ ಮೂರು ತಿಂಗಳು ಮಾತ್ರ. ಮಂತ್ರಿ ಮಂಡಲ ರಚಿಸುವ ಸಂದರ್ಭದಲ್ಲಿ ಇವರ ಕಿತ್ತಾಟ ಆರಂಭವಾಗುತ್ತದೆ. ಬಹುಮತ ಸಾಬೀತು ಮಾಡುವ ಸಂದರ್ಭದಲ್ಲೇ ಸರ್ಕಾರ ಬಿದ್ದರೂ ಆಶ್ಚರ್ಯವಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಕಾಂಗ್ರೆಸ್ ಇರಬಾರದೆಂದು ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದರು. ಆದರೆ ಜೆಡಿಎಸ್ನವರು ಬಿಜೆಪಿಗೆ ನೀಡಿದ್ದ ಜನಾದೇಶವನ್ನು ಧಿಕ್ಕರಿಸಿದ್ದಾರೆ. ಮತ್ತೆ ಅವಕಾಶ ಬಂದರೆ ಸರ್ಕಾರ ರಚಿಸಲು ಪ್ರಯತ್ನ ಮಾಡುತ್ತೇವೆ ಎಂದರು.
ಬಿಡುಗಡೆಗೊಂಡ ಆಡಿಯೋಗಳು ಫೇಕ್
ಶಾಸಕರನ್ನು ಸೆಳೆಯಲು ಬಿಜೆಪಿ ಹಣದ ಆಮಿಷವೊಡ್ಡಿದ್ದಾರೆಂಬ ಆರೋಪ ಸುಳ್ಳು. ಆಡಿಯೋ, ವೀಡಿಯೋಗಳ ಬಗ್ಗೆ ತನಿಖೆ ನಡೆಯಲಿ. ಎಲ್ಲವೂ ಫೇಕ್. ತನಿಖೆ ಬಳಿಕ ಸತ್ಯಾಸತ್ಯತೆ ತಿಳಿಯಲಿದೆ. ಕೇಂದ್ರ ಸರ್ಕಾರ ರಾಜಭವನ ದುರುಪಯೋಗ ಪಡಿಸಿಕೊಂಡಿಲ್ಲ. ನಾವು ಅತಿದೊಡ್ಡ ಪಕ್ಷವೆಂದು ರಾಜ್ಯಪಾಲರು ಆಹ್ವಾನ ಮಾಡಿದ್ದರು ಎಂದರು.
ಕೈ-ತೆನೆ ಕೊಳಕು ರಾಜಕೀಯ
ಕಾಂಗ್ರೆಸ್, ಜೆಡಿಎಸ್ ವಾಚಾಮಗೋಚರವಾಗಿ ಕಚ್ಚಾಡಿದ್ದರು. ಸಿದ್ದು, ಎಚ್ಡಿಕೆ ಹಾವು ಮುಂಗಿಸಿಯಂತಿದ್ದವರು. ಅಧಿಕಾರಕ್ಕಾಗಿ ಈಗ ಒಂದಾಗಿದ್ದಾರೆ. ಕಾಂಗ್ರೆಸ್ ಜತೆ ಜೆಡಿಎಸ್ ಹೋಗಲ್ಲ ಎಂದುಕೊಂಡಿದ್ದೆವು. ಪ್ರಜಾಪ್ರಭುತ್ವ ಧಿಕ್ಕರಿಸಿ ಕಾಂಗ್ರೆಸ್ ಜೊತೆ ಅಧಿಕಾರಕ್ಕಾಗಿ ಒಂದಾಗಿದ್ದಾರೆ. ನಮಗೆ ಜೆಡಿಎಸ್- ಕಾಂಗ್ರೆಸ್ ಕೊಳಕು ರಾಜಕೀಯ ಗೊತ್ತಾದ ಮೇಲೆ ನಾವು ಬಹುಮತ ಸಾಬೀತು ಮಾಡಲಿಲ್ಲ ಎಂದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…