Featured

ಬಹುಮಾನ ಬಂದಿದೆ ಎಂಬ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 7,85,800 ರೂಪಾಯಿ ವಂಚನೆ- vishwanews24

ಮಂಗಳೂರು : ಬಹುಮಾನ ಬಂದಿದೆ ಎಂಬ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 7,85,800 ರೂಪಾಯಿ ವಂಚಿಸಿದ ಬಗ್ಗೆ ನಗರದ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವ್ಯಕ್ತಿಗೆ ಡಿಸೆಂಬರ್‌ನಲ್ಲಿ ನಾಪ್ಟಾಲ್‌ ಸಂಸ್ಥೆಯಿಂದ ರಿಜಿಸ್ಟರ್‌ ಪೋಸ್ಟ್ ಬಂದಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ ನ್ಯಾಪ್‌ಟಾಲ್‌ ಸಂಸ್ಥೆಯ ಹೆಸರಿನಲ್ಲಿ ಒಂದು ಸ್ಕ್ರಾಚ್‌ ಕಾರ್ಡ್‌ ಹಾಗೂ ಪತ್ರ ಇತ್ತು. ಅದನ್ನು ನೋಡಿದಾಗ 12 ಲಕ್ಷ ರೂ. ಬಹುಮಾನ ಬಂದಿರುವುದಾಗಿ ನಮೂದಿಸಲಾಗಿತ್ತು. ಆ ಬಳಿಕ ಅದರಲ್ಲಿ ಇದ್ದ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿದಾಗ ಅಂಚೆಯಲ್ಲಿ ಬಂದ ಪತ್ರದಲ್ಲಿ ಬ್ಯಾಂಕ್‌ ಖಾತೆ ವಿವರ ಹಾಗೂ ವಿಳಾಸವನ್ನು ನಮೂದಿಸಿ ವಾಟ್ಸ್‌ ಅಪ್‌ ಮೂಲಕ ಕಳುಹಿಸುವಂತೆ ತಿಳಿಸಿದ್ದರು. ಪತ್ರದಲ್ಲಿದ್ದಂತೆ ಮಂಗಳೂರಿನ ವ್ಯಕ್ತಿ 9432582448 ನಂಬರ್​ಗೆ ಸಂಪರ್ಕಿಸಿ, ವಿವರಗಳನ್ನು ಕಳುಹಿಸಿದ್ದರು. ಆ ಬಳಿಕ ಬೇರೊಂದು ನಂಬರ್‌ನಿಂದ ಕರೆ ಬಂದಿದ್ದು, ತನ್ನ ಹೆಸರು ಪ್ರದೀಪ್‌ ಪೂಜಾರಿ, ನಿಮ್ಮ ಬಹುಮಾನ ಪಡೆದುಕೊಳ್ಳಲು ಕೆಲವು ಶುಲ್ಕಗಳಿದ್ದು, ಬಹುಮಾನದ ಹಣ ಪಡೆಯಲು 46 ಸಾವಿರ ಮತ್ತು ಇತರ ಶುಲ್ಕ ಪಾವತಿಸಲು ಸೂಚಿಸಿದ್ದಾನೆ. ಅದನ್ನು ಮೊದಲು ಪಾವತಿಸುವಂತೆ ತಿಳಿಸಿದ್ದನು. 2020 ಡಿಸೆಂಬರ್ 12 ರಿಂದ 2021 ಮಾರ್ಚ್ 12 ದಿನಾಂಕದ ವರೆಗೆ ಮಂಗಳೂರಿನ ವ್ಯಕ್ತಿಯಿಂದ ಬಹುಮಾನ ನೀಡುತ್ತೇವೆ ಎಂದು 7,85,800 ರೂ. ವರ್ಗಾಯಿಸಿಕೊಂಡಿದ್ದಾರೆ. ಆರೋಪಿಗಳು ಬಹುಮಾನ ನೀಡದೇ ವಂಚನೆ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಬಳಿಕ ಈ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬ್ಯುರೋ ವರದಿ: ಮಂಗಳೂರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago