ಮಂಗಳೂರು : ಬಹುಮಾನ ಬಂದಿದೆ ಎಂಬ ನೆಪದಲ್ಲಿ ವ್ಯಕ್ತಿಯೊಬ್ಬರಿಗೆ 7,85,800 ರೂಪಾಯಿ ವಂಚಿಸಿದ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವ್ಯಕ್ತಿಗೆ ಡಿಸೆಂಬರ್‌ನಲ್ಲಿ ನಾಪ್ಟಾಲ್ ಸಂಸ್ಥೆಯಿಂದ ರಿಜಿಸ್ಟರ್ ಪೋಸ್ಟ್ ಬಂದಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ ನ್ಯಾಪ್‌ಟಾಲ್ ಸಂಸ್ಥೆಯ ಹೆಸರಿನಲ್ಲಿ ಒಂದು ಸ್ಕ್ರಾಚ್ ಕಾರ್ಡ್ ಹಾಗೂ ಪತ್ರ ಇತ್ತು. ಅದನ್ನು ನೋಡಿದಾಗ 12 ಲಕ್ಷ ರೂ. ಬಹುಮಾನ ಬಂದಿರುವುದಾಗಿ ನಮೂದಿಸಲಾಗಿತ್ತು. ಆ ಬಳಿಕ ಅದರಲ್ಲಿ ಇದ್ದ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿದಾಗ ಅಂಚೆಯಲ್ಲಿ ಬಂದ ಪತ್ರದಲ್ಲಿ ಬ್ಯಾಂಕ್ ಖಾತೆ ವಿವರ ಹಾಗೂ ವಿಳಾಸವನ್ನು ನಮೂದಿಸಿ ವಾಟ್ಸ್ ಅಪ್ ಮೂಲಕ ಕಳುಹಿಸುವಂತೆ ತಿಳಿಸಿದ್ದರು. ಪತ್ರದಲ್ಲಿದ್ದಂತೆ ಮಂಗಳೂರಿನ ವ್ಯಕ್ತಿ 9432582448 ನಂಬರ್ಗೆ ಸಂಪರ್ಕಿಸಿ, ವಿವರಗಳನ್ನು ಕಳುಹಿಸಿದ್ದರು. ಆ ಬಳಿಕ ಬೇರೊಂದು ನಂಬರ್‌ನಿಂದ ಕರೆ ಬಂದಿದ್ದು, ತನ್ನ ಹೆಸರು ಪ್ರದೀಪ್ ಪೂಜಾರಿ, ನಿಮ್ಮ ಬಹುಮಾನ ಪಡೆದುಕೊಳ್ಳಲು ಕೆಲವು ಶುಲ್ಕಗಳಿದ್ದು, ಬಹುಮಾನದ ಹಣ ಪಡೆಯಲು 46 ಸಾವಿರ ಮತ್ತು ಇತರ ಶುಲ್ಕ ಪಾವತಿಸಲು ಸೂಚಿಸಿದ್ದಾನೆ. ಅದನ್ನು ಮೊದಲು ಪಾವತಿಸುವಂತೆ ತಿಳಿಸಿದ್ದನು. 2020 ಡಿಸೆಂಬರ್ 12 ರಿಂದ 2021 ಮಾರ್ಚ್ 12 ದಿನಾಂಕದ ವರೆಗೆ ಮಂಗಳೂರಿನ ವ್ಯಕ್ತಿಯಿಂದ ಬಹುಮಾನ ನೀಡುತ್ತೇವೆ ಎಂದು 7,85,800 ರೂ. ವರ್ಗಾಯಿಸಿಕೊಂಡಿದ್ದಾರೆ. ಆರೋಪಿಗಳು ಬಹುಮಾನ ನೀಡದೇ ವಂಚನೆ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದ ಬಳಿಕ ಈ ವ್ಯಕ್ತಿ ಮಂಗಳೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬ್ಯುರೋ ವರದಿ: ಮಂಗಳೂರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…