ಮನಮಾ : ಇಲ್ಲಿನ 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯ ಡಾಲರ್ 4.2 ಮಿಲಿಯನ್ ವೆಚ್ಚದಲ್ಲಿ ಪುನರಾಭಿವೃದ್ಧಿ ಯೋಜನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.
ಬಹ್ರೈನ್ ಗೆ ಮೊದಲ ಬಾರಿಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಾಗಿದ್ದು ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಂತರ ಟ್ವೀಟ್ ಮಾಡಿರುವ ಪ್ರಧಾನಿ, ಬಹ್ರೈನ್ ನ ಶ್ರೀನಾಥಜೀ ದೇವಸ್ಥಾನದಲ್ಲಿ ಉತ್ತಮ ಸಮಯ ಕಳೆದೆ. ಕೊಲ್ಲಿ ರಾಷ್ಟ್ರಗಳಲ್ಲಿ ಅತ್ಯಂತ ಪುರಾತನ ದೇವಸ್ಥಾನಗಳಲ್ಲಿ ಒಂದಾಗಿರುವ ಇದು ಭಾರತ ಮತ್ತು ಬಹ್ರೈನ್ ಮಧ್ಯೆ ಗಟ್ಟಿಯಾದ ಸಂಬಂಧ ಬೆಳೆಸುತ್ತದೆ ಎಂದು ಹೇಳಿದ್ದಾರೆ. ದೇವಸ್ಥಾನಕ್ಕೆ ಬಂದ ಭಾರತೀಯರನ್ನು ಮೋದಿಯವರು ಮಾತನಾಡಿಸಿದರು.
4.2 ಮಿಲಿಯನ್ ವೆಚ್ಚದಲ್ಲಿ ದೇವಸ್ಥಾನದ ಮರು ಅಭಿವೃದ್ಧಿ ಯೋಜನೆಗಳನ್ನು 16 ಸಾವಿರದ 500 ಚದರಡಿ ವಿಸ್ತೀರ್ಣದಲ್ಲಿ ಹೊಸ ನಾಲ್ಕು ಮಹಡಿಯ ಕಟ್ಟಡ 45 ಸಾವಿರ ಚದರಡಿ 30 ಮೀಟರ್ ಎತ್ತರ ಹೊಂದಿರುತ್ತದೆ. ಮರು ಅಭಿವೃದ್ಧಿ ಮಾಡುವಾಗ 200 ವರ್ಷ ಹಳೆಯ ದೇವಸ್ಥಾನದ ಪರಂಪರೆಯನ್ನು ತೋರಿಸಲಾಗುತ್ತದೆ. ಹೊಸ ಸಾಂಪ್ರದಾಯಿಕ ಸಂಕೀರ್ಣವು ಗರ್ಭಗುಡಿ ಮತ್ತು ಪ್ರಾರ್ಥನಾ ಮಂದಿರಗಳನ್ನು ಹೊಂದಿರುತ್ತದೆ.
ಬಹ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…