Featured

ಬಾಂಗ್ಲಾದೇಶದಲ್ಲಿ ಇಸ್ಕಾನ್‌ ಚಟುವಟಿಕೆಯನ್ನು ನಿಷೇಧಿಸಲು ಹೈಕೋರ್ಟ್‌ ನಿರಾಕರಣೆ – vishwanews24

ಢಾಕಾ: ಬಾಂಗ್ಲಾದೇಶದಲ್ಲಿ ಇಸ್ಕಾನ್‌ ಚಟುವಟಿಕೆಯನ್ನು ನಿಷೇಧಿಸುವ ಸ್ವಯಂ ಪ್ರೇರಿತ ಆದೇಶವನ್ನು ಜಾರಿಗೊಳಿಸಲು ಢಾಕಾ ಹೈಕೋರ್ಟ್‌ ಗುರುವಾರ (ನ.28) ನಿರಾಕರಿಸಿದ್ದು, ಇದು ಬಾಂಗ್ಲಾದೇಶ್‌ ಸರ್ಕಾರಕ್ಕೆ ತೀವ್ರ ಮುಖಭಂಗಕ್ಕೀಡು ಮಾಡಿದೆ.

ಇಸ್ಕಾನ್‌ ನಿಷೇಧಕ್ಕೆ ಸಂಬಂಧಿಸಿದಂತೆ ಬಾಂಗ್ಲಾ ಸರ್ಕಾರದ ಅಧಿಕಾರಿಗಳೇ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿರುವುದಾಗಿ ದ ಡೈಲಿ ಸ್ಟಾರ್‌ ವರದಿ ಮಾಡಿದೆ.

ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ವಕೀಲ ಮೊಹಮ್ಮದ್‌ ಮೋನಿರ್‌ ಉದ್ದೀನ್‌, ಇಸ್ಕಾನ್‌ ಗೆ ಸಂಬಂಧಿಸಿದ ಸುದ್ದಿ ಪ್ರಕಟಿಸಿದ್ದ ಹಲವಾರು ದಿನಪತ್ರಿಕೆಗಳ ವರದಿಯನ್ನು ಪೀಠಕ್ಕೆ ಸಲ್ಲಿಸಿದ್ದರು.

ಇಸ್ಕಾನ್‌ ಚಟುವಟಿಕೆಗೆ ಸಂಬಂಧಿಸಿದ ವರದಿಗಳು ಇದಾಗಿದ್ದು, ಇದನ್ನು ಪರಿಶೀಲಿಸಬೇಕು. ಅಲ್ಲದೇ ಹೈಕೋರ್ಟ್‌ ಇಸ್ಕಾನ್‌ ಸಂಘಟನೆಯನ್ನು ನಿಷೇಧಿಸಿ, ಚತ್ತೋಗ್ರಾಮ್‌, ರಂಗ್‌ ಪುರ್‌ ಹಾಗೂ ದಿನಾಜ್‌ ಪುರ್‌ ನಲ್ಲಿ ಸೆಕ್ಷನ್‌ 144 ಜಾರಿಗೊಳಿಸಲು ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದರು.

ಹೈಕೋರ್ಟ್‌ ಪೀಠದ ಜಸ್ಟೀಸ್‌ ಫರಾಹ್‌ ಮೆಹಬೂಬ್‌ ಮತ್ತು ಜಸ್ಟೀಸ್‌ ದೇಬಸೀಸ್‌ ರಾಯ್‌ ಚೌಧುರಿ, ಇತ್ತೀಚೆಗಿನ ಇಸ್ಕಾನ್‌ ಚಟುವಟಿಕೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡ ಕ್ರಮಗಳ ಸಂಪೂರ್ಣ ವಿವರ ನೀಡುವಂತೆ ಸೂಚಿಸಿರುವುದಾಗಿ ವರದಿ ವಿವರಿಸಿದೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದ ಹಿಂದೂ ಮುಖಂಡ, ಇಸ್ಕಾನ್‌ ನ ಚಿನ್ಮಯ್‌ ಕೃಷ್ಣದಾಸ್‌ ಬ್ರಹ್ಮಚಾರಿಯನ್ನು ದೇಶದ್ರೋಹ ಆರೋಪದ ಮೇಲೆ ಬಾಂಗ್ಲಾ ಸರ್ಕಾರ ಬಂಧಿಸಿತ್ತು. ಬಳಿಕ ಇಸ್ಕಾನ್‌ ಸಂಘಟನೆ ನಿಷೇಧಿಸುವಂತೆ ಕೋರಿ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿತ್ತು

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago