ಕೋಲ್ಕತ್ತಾ,: ಬಾಂಗ್ಲಾದೇಶದ 4,800 ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಸಿಎಂ ಸುವೇಂದು ಅಧಿಕಾರಿ ತಿಳಿಸಿದ್ದಾರೆ.
“ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸುರಕ್ಷಿತಗೊಳಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಗಟ್ಟುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆ. ಬಿಜೆಪಿಯ ವಿಶೇಷ ತರಬೇತಿ ಶಿಬಿರದ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಗಡಿ ಜಿಲ್ಲೆಗಳ ವಸತಿ ಕೇಂದ್ರಗಳಿಂದ ಈಗಾಗಲೇ ಸುಮಾರು 4,800 ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ಯಶಸ್ವಿಯಾಗಿ ಗಡೀಪಾರು ಮಾಡಲಾಗಿದ್ದು, ಇನ್ನುಳಿದ 836 ಜನರ ಸ್ವದೇಶಿ ವಾಪಸಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ” ಎಂದು ಹೇಳಿದರು.
“ಗಡಿ ಭದ್ರತೆ ಮತ್ತು ಜನಗಣತಿ ಯೋಜನೆಗಳು ಗಡಿ ರಕ್ಷಣೆಯನ್ನು ಬಲಪಡಿಸುವುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರವು ಇನ್ನೂ ತಡೆಗೋಡೆ ನಿರ್ಮಾಣ ಬಾಕಿ ಇರುವ 556 ಕಿ.ಮೀ ವ್ಯಾಪ್ತಿಯ ಪೈಕಿ 100 ಕಿ.ಮೀ ಭೂಮಿಯನ್ನು ಈಗಾಗಲೇ ಭದ್ರತಾ ಪಡೆಗೆ ಹಸ್ತಾಂತರಿಸಿದೆ. ಈ ಪೈಕಿ ಉತ್ತರ ಬಂಗಾಳದ ಕಾರ್ಯತಂತ್ರದ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಚಿಕನ್ಸ್ ನೆಕ್ ವಲಯಕ್ಕೆ ಮೊದಲ ಆದ್ಯತೆ ನೀಡಲಾಗಿದೆ” ಎಂದು ಮಾಹಿತಿ ನೀಡಿದರು.
“ರಾಜ್ಯದಲ್ಲಿ ಪಾರದರ್ಶಕ ಆಡಳಿತವನ್ನು ತರಲು ಜನಗಣತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಆಗಸ್ಟ್ 1 ರಿಂದ ಆಗಸ್ಟ್ 15 ರವರೆಗೆ ಮನೆ-ಮನೆ ಸಮೀಕ್ಷೆ ನಡೆಯಲಿದೆ. ಮುಂದಿನ ವರ್ಷದ ಫೆಬ್ರವರಿ ಅಂತ್ಯದ ವೇಳೆಗೆ ಈ ಪ್ರಕ್ರಿಯೆ ಪೂರ್ಣಗೊಂಡು, ಗಡಿ ವಿಂಗಡಣೆ ಕಾರ್ಯಗಳು ನಡೆಯಲಿವೆ” ಎಂದರು.
ಕೇರಳಕ್ಕೆ ಇಂದು ಮುಂಗಾರು ಪ್ರವೇಶ : ಇನ್ನೆರೆಡು ದಿನದಲ್ಲಿ ಕರ್ನಾಟಕಕ್ಕೆ ಭಾರೀ ಮಳೆಯ ಮುನ್ಸೂಚನೆ ಬೆಂಗಳೂರು: ಕೇರಳಕ್ಕೆ ಇಂದು (ಜೂ.4)…
ಉಡುಪಿ : ಜೂ. 6 ರಂದು ನೇರ ಸಂದರ್ಶನ ಡುಪಿ: ಉಡುಪಿಯ ಉದ್ಯಾವರದ ಐ.ಒ.ಸಿ.ಎಲ್ ಪೆಟ್ರೋಲ್ ಬಂಕ್ ಬಳಿಯ ಅರವಿಂದ್…
ಕರ್ನಾಟಕವನ್ನ ಯಶಸ್ವಿಯಾಗಿ ಮುನ್ನಡೆಸುತ್ತೀರಿ ಎಂಬ ಅದಮ್ಯ ವಿಶ್ವಾಸ ನನಗಿದೆ : ಡಿಕೆಶಿಗೆ ಸೋನಿಯಾ ಗಾಂಧಿ ಶುಭ ಹಾರೈಕೆ ಹೊಸ ಜವಾಬ್ದಾರಿಯನ್ನ…
ಡಿ.ಕೆ.ಶಿವಕುಮಾರ್ ಸಿಎಂ : ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ : ಕೆ. ಕೃಷ್ಣಮೂರ್ತಿ ಆಚಾರ್ಯ ಉಡುಪಿ: ಕಾಂಗ್ರೆಸ್…
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ…
ರಾಜ್ಯಸಭೆ ಟಿಕೆಟ್ ರೇಸ್ : ಪ್ರಮುಖ ಆಕಾಂಕ್ಷಿಗಳ ಪಟ್ಟಿಯಲ್ಲಿ ಕರಾವಳಿಯ ನಾಯಕ ಪ್ರಮೋದ್ ಮಧ್ವರಾಜ್ ..!! ಕರಾವಳಿ ಭಾಗದ ರಾಜಕೀಯ…