ಬೆಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಬಾಂಬ್ ಸ್ಫೋಟ ಘಟನೆಯನ್ನು ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳನ್ನು ಆಮೂಲಗ್ರಹವಾಗಿ ತನಿಖೆ ಮಾಡಿ, ದ್ರೋಹಿಗಳನ್ನು ಮಟ್ಟ ಹಾಕಲು ಪೋಲಿಸರು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳವೂ ಇದಕ್ಕೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 📛 ಶ್ರದ್ಧಾ ಹತ್ಯೆ ಪ್ರಕರಣ : ಕೋರ್ಟ್ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಅಫ್ತಾಬ್ – Vishwanews24
ಈವರೆಗಿನ ಮಾಹಿತಿ ಆಧರಿಸಿ, ರಾಜ್ಯ ಪೊಲೀಸರು ಉಗ್ರಗಾಮಿ ಚಟುವಟಿಕೆಗಳಿಗೆ ಸಹಕರಿಸಿದವರ ವಿರುದ್ಧ ತನಿಖೆ ತೀವ್ರಗೊಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನಿಂದ ಇನ್ನೂ ಹೆಚ್ಚಿನ ಮಾಹಿತಿಗಳು ಹೊರಬರಬೇಕಿದೆ ಎಂದು ಹೇಳಿದ್ದಾರೆ.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…