Featured

ಬಾಕ್ಸಿಂಗ್​ಗೆ ನಿವೃತ್ತಿ ಘೋಷಿಸಿದ ವಿಶ್ವ ಚಾಂಪಿಯನ್ ಮೇರಿ ಕೋಮ್ – vishwanews24

ಬಾಕ್ಸಿಂಗ್ ಇತಿಹಾಸದಲ್ಲಿ 6 ವಿಶ್ವ ಪ್ರಶಸ್ತಿ ಗೆದ್ದ ಮೊದಲ ಮಹಿಳಾ ಬಾಕ್ಸರ್ ಮೇರಿ ಕೋಮ್

ಅಸ್ಸಾಂ : ಆರು ಬಾರಿಯ ವಿಶ್ವ ಚಾಂಪಿಯನ್ ಮತ್ತು 2012ರ ಒಲಿಂಪಿಕ್ ಪದಕ ವಿಜೇತೆ ಹಾಗೂ ಸ್ಟಾರ್ ಇಂಡಿಯಾ ಬಾಕ್ಸರ್ ಮಾಂಗ್ಟೆ ಚುಂಗ್ನೈಜಾಂಗ್ ಮೇರಿ ಕೋಮ್ ಬುಧವಾರ ಬಾಕ್ಸಿಂಗ್​ಗೆ ನಿವೃತ್ತಿ ಘೋಷಿಸಿದ್ದಾರೆ.

ತಮ್ಮ ಕೈಗವಸು ಕಳಚಿ ಗೋಡೆಗೆ ನೇತು ಹಾಕಿದ್ದಾರೆ. ಅಂತರರಾಷ್ಟ್ರೀಯ ಬಾಕ್ಸಿಂಗ್ ಅಸೋಸಿಯೇಷನ್​​(IBA) ನಿಯಮಗಳ ಪ್ರಕಾರ ಪುರುಷ ಮತ್ತು ಮಹಿಳಾ ಬಾಕ್ಸರ್​ಗಳು 40 ವರ್ಷ ವಯಸ್ಸಿನವರೆಗೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲಾಗುತ್ತದೆ.

ತಮಗೆ ಆಡುವ ಹಂಬಲ ಇದ್ದರೂ 41 ವರ್ಷದ ಮೇರಿ ಕೋಮ್​, ನಿಯಮಗಳ ಪ್ರಕಾರ ವಯಸ್ಸಿನ ಮಿತಿಯಿಂದ ತನ್ನ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ನನಗೆ ಇನ್ನೂ ಹಸಿವು ಇದೆ. ಆದರೆ ದುರದೃಷ್ಟವಶಾತ್ ವಯಸ್ಸಿನ ಮಿತಿ ಮುಗಿದಿರುವುದರಿಂದ ನಾನು ಯಾವುದೇ ಸ್ಪರ್ಧೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ನನಗಿನ್ನೂ ಆಡುವ ಸಾಮರ್ಥ್ಯ ಇದೆ. ಆದರೆ ವಯಸ್ಸಿನ ಮಿತಿಯಿಂದಾಗಿ ಬಾಕ್ಸಿಂಗ್​​ನಿಂದ ಹಿಂದೆ ಸರಿಯುತ್ತಿದ್ದೇನೆ. ನನ್ನ ಜೀವನದಲ್ಲಿ ಎಲ್ಲವನ್ನೂ ಸಾಧಿಸಿದೆ ಇದೀಗ ನಿವೃತ್ತಿ ಹೊಂದುವ ಸಮಯ’ ಎಂದು ತಿಳಿಸಿದ್ದಾರೆ.

6 ವಿಶ್ವ ಪ್ರಶಸ್ತಿ ಗೆದ್ದ ಮೊದಲ ಮಹಿಳಾ ಬಾಕ್ಸರ್: ಬಾಕ್ಸಿಂಗ್ ಇತಿಹಾಸದಲ್ಲಿ ಆರು ವಿಶ್ವ ಪ್ರಶಸ್ತಿಗಳನ್ನು ಗೆದ್ದ ಮೊದಲ ಮಹಿಳಾ ಬಾಕ್ಸರ್ ಮೇರಿ ಕೋಮ್‌. ಐದು ಬಾರಿ ಏಷ್ಯನ್ ಚಾಂಪಿಯನ್ ಆಗಿರುವ ಅವರು 2014ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕವನ್ನು ಪಡೆದ ಭಾರತದ ಮೊದಲ ಮಹಿಳಾ ಬಾಕ್ಸರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

15 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

16 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

16 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

17 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

17 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

17 hours ago