ಹೊಸದಿಲ್ಲಿ : ಸೂಪರ್‌ಸ್ಟಾರ್ ರಜನೀಕಾಂತ್ ಮತ್ತು ಬಾಲಿವುಡ್ ನಟ ಅಕ್ಷಯ್ ಕುಮಾರ್ ಮುಖ್ಯ ಭೂಮಿಕೆಯಲ್ಲಿರುವ 2.0 ಚಿತ್ರ ಬಿಡುಗಡೆಗೊಂಡ ಒಂದು ವಾರದೊಳಗೆ 500 ಕೋಟಿ ರೂ. ಮೀರಿದ ಸಂಪಾದನೆಯನ್ನು ದಾಖಲಿಸಿದೆ.
ಬಿಡುಗಡೆಗೆ ಮೊದಲೇ ಬಹುನಿರೀಕ್ಷೆ ಹುಟ್ಟಿಸಿದ್ದ ಸಿನಿಮಾ 2.0 ನ.29ರಂದು ಬಿಡುಗಡೆಯಾಗಿತ್ತು. ಬಾಹುಬಲಿ (ಮೊದಲನೇ ಭಾಗ) ಚಲನಚಿತ್ರ ತನ್ನ ಇಡೀ ಪ್ರದರ್ಶನದಲ್ಲಿ ಗಳಿಸಿದಷ್ಟನ್ನು ಒಂದೇ ವಾರದಲ್ಲಿ ಸಂಪಾದಿಸಿ ಬಾಹುಬಲಿ ದಾಖಲೆ ಮುರಿದಿತ್ತು. 2.0 ಸದ್ಯ ಭಾರತದಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿದ ಚಿತ್ರಗಳ ಪಟ್ಟಿಯಲ್ಲಿ 12 ನೇ ಸ್ಥಾನ ಪಡೆದುಕೊಂಡಿದೆ.
ದಂಗಲ್, ಟೈಗರ್ ಜಿಂದಾ ಹೈ, ಪದ್ಮಾವತ್, ಸಂಜು, ಸುಲ್ತಾನ್ ಸಿನಿಮಾಗಳು ವಿಶ್ವದಾದ್ಯಂತ ಪ್ರದರ್ಶನಗೊಂಡು ಗಳಿಸಿದ್ದ ಮೊತ್ತವನ್ನೂ 2.0 ಚಿತ್ರ ಮೀರಿಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
2.0 ಚಿತ್ರಕಥೆಯನ್ನು ಬರೆದು ನಿರ್ದೇಶಿಸಿದವರು ಶಂಕರ್. ಇದು 500 ಕೋಟಿ ರೂ. ವೆಚ್ಚದ ನಿರ್ಮಾಣ. 3ಡಿ ಯಲ್ಲಿ ನಿರ್ಮಾಣಗೊಂಡ ಮತ್ತು ವಿಶ್ವಾದ್ಯಂತ 1,500 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ತೆರೆಕಂಡ ಮೊತ್ತ ಮೊದಲ ಭಾರತೀಯ ಚಿತ್ರ.
ಟ್ರೇಡ್ ವಿಶ್ಲೇಷಕ ರಮೇಶ್ ಬಾಲಾ ಅವರು 2.0 ಸಿನಿಮಾದ ಜಗತ್ತಿನಾದ್ಯಂತ ಪ್ರದರ್ಶನ, ಗಳಿಕೆ ಬಗ್ಗೆ ಟ್ವೀಟ್ ಮಾಡಿದ್ದು, ಮೊದಲವಾರದಲ್ಲೇ 500 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದಿದ್ದಾರೆ.
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…