ದಸರಾ ವಾರಾಂತ್ಯದಲ್ಲಿ ಬಿಡುಗಡೆಗೊಂಡ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ ದಿ ವಿಲನ್ ‘ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಚಿಂದಿ ಉಡಾಯಿಸಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಗಾಂಧಿನಗರದ ಚಿತ್ರೋದ್ಯಮದ ಪಂಡಿತರ ಪ್ರಕಾರ ಶನಿವಾರದ ವರೆಗೂ ಜಿಎಸ್ ಟಿ ಮತ್ತು ಸೇವಾ ಶುಲ್ಕ ಸೇರಿದಂತೆ ‘ ದಿ ವಿಲನ್ ಚಿತ್ರ ಒಟ್ಟಾರೆ ಕಲೆಕ್ಷನ್ 29 ಕೋಟಿ ರೂ. ಆಗಿದೆ.
ಭಾನುವಾರದವರೆಗೂ ಸುಮಾರು 40 ಕೋಟಿ ರೂ. ಬಾಚಿರುವ ಸಾಧ್ಯತೆ ಇದೆ.ಇದೇ ರೀತಿಯಲ್ಲಿ ಇನ್ನೇರಡು ಮೂರು ಕಲೆಕ್ಷನ್ ಮುಂದುವರೆದರೆ 100 ಕೋಟಿ ಕ್ಲಬ್ ಪ್ರವೇಶಿಸುವ ಸಾಧ್ಯತೆ ಇದೆ ಎಂದು ವಿತರಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರೇಮ್ ನಿರ್ದೇಶನದ ‘ ದಿ ವಿಲನ್ ಹೊರ ರಾಜ್ಯಗಳಲ್ಲಿಯೂ ಬಿಡುಗಡೆಯಾಗಿದ್ದು, ಹೈದರಾಬಾದ್ ಮತ್ತಿತರ ಕಡೆಗಳಲ್ಲಿ ಪ್ರದರ್ಶನ ಹೆಚ್ಚಿದೆ. ಇಂಗ್ಲೆಂಡ್, ಆಸ್ಟ್ರೇಲಿಯಾ, ಸಿಡ್ನಿ, ಮತ್ತಿತರ ಕಡೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…