Featured

ಬಾಗಲಕೋಟೆ: ಅನ್ಯಜಾತಿ ಯುವಕನೊಂದಿಗೆ ಮಗಳ ಪ್ರೀತಿ : ಮದುವೆ ಮಾಡುವುದಾಗಿ ನಂಬಿಸಿ ತಂದೆಯಿಂದ ಪ್ರೇಮಿಗಳ ಮರ್ಯಾದಾ ಹತ್ಯೆ; ಮೂವರ ಬಂಧನ – Vishwanews24

ಬಾಗಲಕೋಟೆ: ಅನ್ಯಜಾತಿ ಯುವಕನೊಂದಿಗೆ ಮಗಳ ಪ್ರೀತಿ : ಮದುವೆ ಮಾಡುವುದಾಗಿ ನಂಬಿಸಿ ತಂದೆಯಿಂದ ಪ್ರೇಮಿಗಳ ಮರ್ಯಾದಾ ಹತ್ಯೆ; ಮೂವರ ಬಂಧನ

ಬಾಗಲಕೋಟೆ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಳೆಂಬ ಕಾರಣಕ್ಕೆ ಮಗಳು ಹಾಗೂ ಆಕೆಯ ಪ್ರಿಯಕರನನ್ನು ತಂದೆ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಬೇವಿನಮಟ್ಟಿಯಲ್ಲಿ ನಡೆದಿದೆ.

ಬಾಗಲಕೋಟೆಯ ಬೇವಿನಮಟ್ಟಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಬೇವಿನಮಟ್ಟಿ ಗ್ರಾಮದ 18ವರ್ಷದ ರಾಜೇಶ್ವರಿ ಕರಡಿ 24 ವರ್ಷದ ವಿಶ್ವನಾಥ್​ ನೆಲಗಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇದೀಗ ಇಬ್ಬರದ್ದು ಕೊಲೆಯಾಗಿದ್ದು, ಆದರೆ ಶವಗಳು ಪತ್ತೆಯಾಗಿಲ್ಲ.

ಕಳೆದ ಎರಡು ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಯುವತಿ ಪೋಷಕರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಆಕೆಗೆ ಎಚ್ಚರಿಕೆ ನೀಡಿದ್ದಾರೆ. ಆತ ಕೆಳ ಜಾತಿಯವನಾಗಿದ್ದು, ಆತನ ಜೊತೆಗಿನ ಒಡನಾಟ ಬಿಡುವಂತೆ ಬುದ್ದಿ ಹೇಳಿದ್ದಾರೆ, ಜಾತಿ ವಿಚಾರವಾಗಿ ಈ ಹಿಂದೆ ಎರಡೂ ಕುಟುಂಬಗಳಲ್ಲಿ ಜಗಳವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೇವಿನಮಟ್ಟಿ, ಹನುಮಂತ ಬೇವಿನಮಟ್ಟಿ ಹಾಗೂ ಬೀರಪ್ಪ ದಳವಿ ಎಂಬ ಮೂವರನ್ನು ಬಂಧಿಸಲಾಗಿದೆ.

ಆರಂಭದಲ್ಲಿ ಜೋಡಿ ಓಡಿ ಹೋಗಿದ್ದಾರೆ ಎಂದು ಹೇಳಲಾಗಿತ್ತು. ಯುವಕನ ತಾಯಿ ಮಗ ಕಾಣಿಸುತ್ತಿಲ್ಲ ಎಂದು ದೂರು ದಾಖಲಿಸಿದ್ದರು. ಇತ್ತ ಮಗಳನ್ನು ಅಪಹರಿಸಲಾಗಿದೆ ಎಂದು ಅಪ್ರಾಪ್ತೆಯ ಪೋಷಕರು ದೂರು ದಾಖಲಿಸಿದ್ದರು. ಪೊಲೀಸರು ತನಿಖೆ ವೇಳೆ ಅಪ್ರಾಪ್ತೆಯ ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮರ್ಯಾದಾ ಹತ್ಯೆ ಬೆಳಕಿಗೆ ಬಂದಿದೆ. ಇದನ್ನೂ ಓದಿ : ಮಳವಳ್ಳಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಬಾಲಕಿ ನಿವಾಸಕ್ಕೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹ್ಮದ್ ಖಾನ್ ಭೇಟಿ..ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್ ..

ವಿಶ್ವನಾಥ್ ಅವರ ಪೋಷಕರು ಜೀವನೋಪಾಯಕ್ಕಾಗಿ ಕೇರಳದ ಕಾಸರಗೋಡಿಗೆ ಕಳುಹಿಸಿದ್ದರು, ಅಲ್ಲಿಆತ ದಿನಗೂಲಿ ಕೆಲಸ ಮಾಡಲು ಪ್ರಾರಂಭಿಸಿದ್ದ. ಅಷ್ಟರಲ್ಲಿ ರಾಜೇಶ್ವರಿ ತನ್ನ ತಂದೆ-ತಾಯಿಗೆ ವಿಶ್ವನಾಥ್ ನನ್ನು ಮದುವೆಯಾಗುವ ಇಚ್ಛೆಯನ್ನು ತಿಳಿಸಿದ್ದಳು.

ಯುವತಿಯ ಕುಟುಂಬಸ್ಥರು ಹೆಣೆದ ಬಲೆಗೆ ವಿಶ್ವನಾಥ್‌ ಬಿದ್ದಿದ್ದ. ಮದುವೆ ಮಾಡಿಕೊಡುವುದಾಗಿ ಹೇಳಿ ಆತನನ್ನು ಕರೆಸಿಕೊಂಡಿದ್ದಾರೆ. ವಿಶ್ವನಾಥ್ ನರಗುಂದ ತಲುಪಿದಾಗ ಯುವತಿಯನ್ನು ಬೇರೆ ವಾಹನದಲ್ಲಿ ಕರೆತರುವಾಗ ಆರೋಪಿಗಳು ಆತನನ್ನು ಜೀಪಿನಲ್ಲಿ ಕೂಡಿ ಹಾಕಿದ್ದರು. ಇಬ್ಬರನ್ನೂ ವಾಹನದಲ್ಲಿಯೇ ಹತ್ಯೆ ಮಾಡಿ, ಶವಗಳನ್ನು ಕೃಷ್ಣಾ ನದಿಗೆ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ ಮೃತದೇಹಗಳ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ’ ಎಂದು ಎಸ್‌ಪಿ ತಿಳಿಸಿದರು. ಇದನ್ನೂ ಓದಿ : ಪರೇಶ್ ಮೇಸ್ತ ಪ್ರಕರಣ : ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ : ಸಿಬಿಐ ವರದಿಯಲ್ಲಿ ಉಲ್ಲೇಖ – Vishwanews24

ಎರಡು ದಿನಗಳಿಂದ ವಿಶ್ವನಾಥ್ ಅವರನ್ನು ಸಂಪರ್ಕಿಸಲು ಸಾಧ್ಯವಾಗದಿದ್ದಾಗ, ಆತನ ಪೋಷಕರು ಅಕ್ಟೋಬರ್ 3 ರಂದು ನರಗುಂದ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಬಾಲಕಿಯ ಕುಟುಂಬದವರು ಅಕ್ಟೋಬರ್ 7 ರಂದು ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪಹರಣದ ದೂರು ದಾಖಲಿಸಿದ್ದರು. ಕೃತ್ಯದಲ್ಲಿ ರಾಜೇಶ್ವರಿ ಅವರ ಪೋಷಕರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago