Featured

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟ ;  ಮಹಿಳೆಯ ಎರಡೂ ಕೈಗಳು ತುಂಡು – vishwanews24

ಬಾಗಲಕೋಟೆ : ಹೇರ್ ಡ್ರೈಯರ್ ಸ್ಪೋಟ ;  ಮಹಿಳೆಯ ಎರಡೂ ಹಸ್ತಗಳು ಛಿದ್ರ

ಬಾಗಲಕೋಟೆ: ಹೇರ್ ಡ್ರೈಯರ್ ಮೆಷಿನ್‌ ಸ್ಪೋಟಗೊಂಡು ಮಹಿಳೆಯೊಬ್ಬರ ಎರಡೂ ಕೈಗಳು ತುಂಡಾದ ಘಟನೆ ಜಿಲ್ಲೆಯ ಇಳಕಲ್ಲದ ಬಸವನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಎರಡೂ ಕೈ ತುಂಡಾದ‌ ಮಹಿಳೆಯನ್ನು ಬಸವರಾಜೇಶ್ವರಿ ಯರನಾಳ ಎಂದು ಗುರುತಿಸಲಾಗಿದೆ. ಈ ಘಟನೆ ನ.15ರಂದು ನಡೆದಿದ್ದು, ಇಳಕಲ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸವರಾಜೇಶ್ವರಿ ಪತಿ ಪಾಪಣ್ಣ ಯರನಾಳ ಸೈನಿಕರಾಗಿದ್ದು, 2017ರಲ್ಲಿ ಜಮ್ಮು ಕಾಶ್ಮೀರದಲ್ಲಿ ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿ ಮೃತಪಟ್ಟಿದ್ದರು. ಸದ್ಯ ಬಸವರಾಜೇಶ್ವರಿ ಅವರು ಮಕ್ಕಳೊಂದಿಗೆ ಇಳಕಲ್ಲದಲ್ಲಿ ವಾಸಿಸುತ್ತಿದ್ದು, ಪಕ್ಕದ ಮನೆಯವರಿಗೆ ಬಂದಿದ್ದ ಕೋರಿಯರ್ ಪಾರ್ಸೆಲ್ ಆಗಿ ಬಂದಿದ್ದ ಹೇರ್ ಡ್ರೈಯರ್ ತೆಗೆದು ಸ್ಚಿಚ್ ಬೋರ್ಡ್ ಗೆ ಹಾಕಿ ಆನ್ ಮಾಡಿದಾಗ ಸ್ಪೋಟಗೊಂಡಿದೆ. ಆಗ ಎರಡೂ ಕೈಗಳು ತುಂಡಾಗಿವೆ. ಸದ್ಯ ಇಳಕಲ್ಲದ ಪಾಟೀಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಶಿಕಲಾ ಹೆಸರಲ್ಲಿ ಕೋರಿಯರ್:

ಬಸವನಗರದ ಶಶಿಕಲಾ ಎಂಬವರ ಹೆಸರಿಗೆ ಬಾಗಲಕೋಟೆಯ ಡಿಟಿಡಿಸಿ ಕೋರಿಯರ್ ಬಾಕ್ಸ್ ಬಂದಿದ್ದು, ಕೋರಿಯರ್ ಬಾಯ್ ಶಶಿಕಲಾ ಅವರ ನಂಬರ್ ಗೆ ಕಾಲ್ ಮಾಡಿದಾಗ, ನಾನು ಊರಲ್ಲಿ ಇಲ್ಲ ಪಕ್ಕದ ಮನೆಯ ಬಸವರಾಜೇಶ್ವರಿ ಅವರ‌ ಮನೆಯಲ್ಲಿ ಪಾರ್ಸೆಲ್ ಕೊಡಲು ಹೇಳಿದ್ದರು. ‌ಅಲ್ಲದೇ ನಾನು ಯಾವುದೇ ಆನ್‌ ಲೈನ್ ಪ್ರಾಡಕ್ಟ್‌ ಆರ್ಡರ್‌ ಮಾಡಿಲ್ಲ. ಅದರಲ್ಲಿ ಏನಿದೆ ಎಂದು ಪ್ರಶ್ನಿಸಿದ್ದರು. ಕೋರಿಯರ್ ಪಾರ್ಸೆಲ್ ಪಡೆದ ಬಸವರಾಜೇಶ್ವರಿ ಯರನಾಳ ಅವರು, ಬಾಕ್ಸ್‌ ತೆರೆದು ನೋಡಿದಾಗ ಹೇರ್ ಡ್ರೈಯರ್ ಇದೆ ಎಂದು ತಿಳಿಸಿದ್ದಾರೆ.

ಅದೇ ವೇಳೆಗೆ ಪಕ್ಕದ ಮನೆಯವರು ಬಂದಿದ್ದು, ಆನ್ ಮಾಡಿ ತೋರಿಸಿ ಎಂದು ಕೇಳಿದ್ದು, ಆಗ ಬಸವರಾಜೇಶ್ವರಿ, ಅದನ್ನು ಆನ್ ಮಾಡಲು ವಿದ್ಯುತ್ ಸ್ವಿಚ್ ಬೋರ್ಡ್ ಗೆ ಹಾಕಿ, ಆನ್ ಮಾಡಿದ್ದರು. ಆಗ ಸ್ಪೋಟಗೊಂಡು, ಎರಡೂ ಕೈ ತುಂಡಾಗಿವೆ.

ಪೊಲೀಸರ ತನಿಖೆ:

ಶಶಿಕಲಾ ಅವರು ಹೇರ್ ಡ್ರೈಯರ್‌ ಆರ್ಡರ್‌ ಮಾಡಿರಲಿಲ್ಲ. ಅವರ ಹೆಸರಿನಲ್ಲಿ ಪಾರ್ಸೆಲ್ ಹೇಗೆ ಬಂತು. ಡ್ರೈಯರ್ ಆರ್ಡರ್‌ ಮಾಡಿದವರು ಯಾರು, ಹಣ ಯಾರು ಸಂದಾಯ ಮಾಡಿದರು, ಎಲ್ಲಿಂದ ಹೇರ್ ಡ್ರೈಯರ್ ಬಂತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಶಾಖಪಟ್ಟಣದ ಮೆನು ಫ್ಯಾಕ್ಟರ್ ನ ಹೇರ್ ಡ್ರೈಯರ್ ಇದ್ದು, ಅದು ಬಾಗಲಕೋಟೆಯಿಂದ ಇಳಕಲ್ಲಗೆ ಕೋರಿಯರ್ ಕಳುಹಿಸಲಾಗಿದೆ.

ಇಳಕಲ್ಲ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜೇಶ್ವರಿ ಅವರನ್ನು ಹುನಗುಂದ ಶಾಸಕ‌ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

18 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

20 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

20 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

20 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

20 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

21 hours ago