ಬಳ್ಳಾರಿ: ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಮೂರು ಪ್ರತ್ಯೇಕ ತಂಡವಾಗಿ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಆಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಆವರಣದ ವೆರ್ ಹೌಸ್‌ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಲೋಕಾಯುಕ್ತ ಪರಿಶೀಲನೆ ಮಾಡಿದೆ. ಐವಿ ಹಾಗೂ ಆರ್‌ಎಲ್ ಫ್ಲೂಯಿಡ್ ಔಷಧಿ ಬಂದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಐವಿ ದ್ರಾವಣ ಹಾಗೂ ಬಾಣಂತಿಯರ ಅಸ್ವಸ್ಥ ಆದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ರಿಯಾಕ್ಷನ್ ಆಗಿರುವ ಗ್ಲುಕೋಸ್, ಸೀಜ್ ಆಗಿರುವ 280 ಐವಿ ಫ್ಲೂಯಿಡ್ ಆರ್‌ಎಲ್ ಬಾಟಲ್ ಬಗ್ಗೆಯೂ ಮಾಹಿತಿ ಪಡೆದಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಐವರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದ್ದು, ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಸೂಚನೆ ನೀಡಿದ್ದಾರೆ.
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…