Featured

ಬಾಣಂತಿಯರ ಸಾವು ಪ್ರಕರಣ : ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ : ದಿನೇಶ್ ಗುಂಡೂರಾವ್ – vishwanews24

ಬಳ್ಳಾರಿ ಬಾಣಂತಿಯರ ಸಾವಿನ ಬಗ್ಗೆ ಸರ್ಕಾರ ಗಂಭೀರವಾಗಿದೆ..

ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ

ನನ್ನ ರಾಜೀನಾಮೆಯಿಂದ ಸರಿಯಾಗುತ್ತದೆ ಎಂದಾದರೆ ಅದಕ್ಕೂ ಸಿದ್ಧ..

ಬೆಂಗಳೂರು: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ. ಇದು ಜೀವಕ್ಕೆ ಸಂಬಂಧಿಸಿದ ವಿಚಾರ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪ್ರಕರಣದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ರಾಜೀನಾಮೆಯಿಂದ ಸರಿಯಾಗುತ್ತದೆ ಎಂಬುದೇ ಆದರೆ ಅದಕ್ಕೂ ಸಿದ್ಧ. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ ಎಂದರು.

ಬಳ್ಳಾರಿಯಲ್ಲಿ 9 ಜನರಿಗೆ ಸಮಸ್ಯೆ ಆಗಿತ್ತು. ನಾಲ್ವರು ತೀರಿಕೊಂಡಿದ್ದಾರೆ. ಐದನೇಯವರು ಚಿಕಿತ್ಸೆ ಪಡೆಯುತ್ತಿದ್ದರು. ಅವರೂ ತೀರಿಕೊಂಡಿದ್ದಾರೆ. ಅದೇ ಬ್ಯಾಚ್​ನ ರಿಂಗರ್ ಲ್ಯಾಕ್ಟೇಟ್ ದ್ರಾವಣ‌ ಕೊಡಲಾಗಿತ್ತು. ಈಗಾಗಲೇ ಕಂಪೆನಿ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಮೃತರಿಗೆ ಬೇರೆ ಆರೋಗ್ಯ ಸಮಸ್ಯೆಯೂ ಇತ್ತು ಎನ್ನಲಾಗಿದೆ. ಆದರೆ, ಚೇತರಿಸಿಕೊಳ್ಳುತ್ತಿದ್ದರು ಎಂದು ವೈದ್ಯರು ಹೇಳಿದ್ದರು. ಆದರೆ ಗುರುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದರು ಎಂದು ಸಚಿವರು ಹೇಳಿದರು.

ಬಿಜೆಪಿಯವರು ಖಂಡಿತವಾಗಿಯೂ ಲೋಕಾಯುಕ್ತಕ್ಕೆ ದೂರು ನೀಡಲಿ. ನನ್ನ ರಾಜೀನಾಮೆಯಿಂದ ಸರಿಯಾಗಲಿದೆ ಎಂದಾದರೆ ಅದಕ್ಕೂ ಸಿದ್ಧ. ಆದರೆ, ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

14 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

14 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

14 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

15 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

15 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago