ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣಿಯುವ ತಂತ್ರಗಾರಿಕೆ ರೂಪಿಸಿರುವ ಬಿಜೆಪಿ ಶ್ರೀರಾಮುಲುವನ್ನು ಬಾದಾಮಿ ಕ್ಷೇತ್ರದಲ್ಲಿ ಅಖಾಡಕ್ಕಿಳಿಸಿದೆ.
ಮಂಗಳವಾರ ಬನಶಂಕರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಶ್ರೀರಾಮುಲು ಚುನಾವಣಾಧಿಕಾರಿಗಳಿಗೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಗ್ಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ, ರಾಜ್ಯ ಚುನಾವಣಾ ಉಸ್ತುವಾರಿಗಳಾದ ಪ್ರಕಾಶ್ ಜಾವ್ಡೇಕರ್, ಮುರಳೀಧರ್ ರಾವ್ ಶ್ರೀರಾಮುಲುಗೆ ಸಾಥ್ ನೀಡಿದ್ದರು.
ಈಗಾಗಲೇ ಮೊಳಕಾಲ್ಮೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶ್ರೀರಾಮುಲುವನ್ನು, ಬಾದಾಮಿ ಕ್ಷೇತ್ರದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಖಾಡಕ್ಕಿಳಿಸಿದೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತನ್ನ ಗೆಲುವು ಶತಃಸಿದ್ಧ ಎಂದು ಹೇಳಿದ್ದ ಸಿಎಂ ಸಿದ್ದರಾಮಯ್ಯ ಕೊನೆಯಲ್ಲಿ ಉತ್ತರಕರ್ನಾಟಕ ಭಾಗದ ಜನರ ಒತ್ತಡದ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸುವುದಾಗಿ ಹೇಳಿ ನಾಮಪತ್ರ ಸಲ್ಲಿಸಿದ್ದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…