ಮೈಸೂರು: ಮುಸ್ಲಿಂ ಧರ್ಮದಲ್ಲಿ ಕುಂಕುಮ ಹಣೆಗಿಡುವ ಪದ್ಧತಿಯಿದೆಯೇ, ನಾಡಹಬ್ಬ ದಸರಾ ಉದ್ಘಾಟನೆಗೆ ಬರಲು ಕುಂಕುಮ ಹಣೆಗೆ ಹಾಕಿಕೊಂಡು ಬನ್ನಿ ಎಂದು ಬಾನು ಮುಷ್ತಾಕ್ ಅವರಿಗೆ ಹೇಳಲು ಆಗುತ್ತದೆಯೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರು ಕನ್ನಡಾಂಬೆಯ ಕುಂಕುಮ ಬಗ್ಗೆ ಮಾತನಾಡಿದ್ದಾರೆಯೇ ಇಲ್ಲವೇ ಎಂದು ನನಗೆ ಗೊತ್ತಿಲ್ಲ, ಅದು ಬೇರೆ ವಿಷಯ. ಅವರು ಕನ್ನಡದ ಬರಹಗಾರ್ತಿ ಮತ್ತು ಸಾಹಿತಿ. ಕನ್ನಡದ ಬಗ್ಗೆ ಅವರಿಗೆ ಅಭಿಮಾನ, ಪ್ರೀತಿ, ಆಸಕ್ತಿ ಇಲ್ಲದಿದ್ದರೆ ಆ ಭಾಷೆಯಲ್ಲಿ ಬರೆಯಲು ಆಗುತ್ತದೆಯೆ ಎಂದು ಕೇಳಿದರು.
ಬಾನು ಮುಷ್ತಾಕ್ ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಮ್ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು.
ಮುಸ್ಲಿಂ ಗುರುಗಳು ಬಾನು ಮುಷ್ತಾಕ್ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…