Featured

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ  : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

ಬಾರ್ಕೂರು: ಆರ್‌ಟಿಐ ಕಾರ್ಯಕರ್ತ ಹಲ್ಲೆ ಪ್ರಕರಣ  : ಆರೋಪಗಳನ್ನು ಬಂಧಿಸದಿದ್ದರೆ ತೀವ್ರ ಪ್ರತಿಭಟನೆ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ -Vishwanews24

ಬಾರ್ಕೂರು: ಸಮಾಜಸೇವಕ, ಆರ್‌ಟಿಐ ಕಾರ್ಯಕರ್ತ ಬಾರ್ಕೂರು ಶಂಕರ ಶಾಂತಿಯವರಿಗೆ ಮಾರಣಾಂತಿಕ ಹಲ್ಲೆಯಾಗಿದ್ದು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸೋಮವಾರ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಸದಸ್ಯರು ನಾರಾಯಣ ಗುರು ಸಭಾಭವನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಯವರು ಬಾರ್ಕೂರು ಕಾಳಿಕಾಂಬ ದೇವಸ್ಥಾನದ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ ಆರ್ ಟಿ ಐ ಕಾರ್ಯಕರ್ತರಾದ ಶಂಕರ್ ಶಾಂತಿಯವರಿಗೆ ಫೆಬ್ರವರಿ 20 ರಂದು ಕೆಲ ದುಷ್ಕರ್ಮಿ ಗಳು ಸೇರಿ ಹಲ್ಲೆ ನಡೆಸಿದ್ದು ತಕ್ಷಣ ಆರೋಪಗಳನ್ನು ಬಂಧಿಸುವಂತೆ ಒತ್ತಾಯಿಸಿದರು.

ಮಂಗಳೂರು :ಐಷಾರಾಮಿ ಕಾರು ಮಾರಾಟ ಪ್ರಕರಣ : ಮತ್ತಿಬ್ಬರು ಪೊಲೀಸರ ಅಮಾನತು -Vishwanews24

ಹಲ್ಲೆ ಮಾಡಿದವರ ಮೇಲೆ ಈಗಾಗಲೇ ಎಫ್.ಐ.ಆರ್ ದಾಖಲಾಗಿದ್ದರೂ ಪೋಲಿಸ್ ಇಲಾಖೆ ಅವರನ್ನು ಬಂಧನ ಮಾಡಿಲ್ಲ. ಅವರು ಸಮಾಜದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಶಂಕರ್ ಅವರಿಗೆ ಹಲ್ಲೆ ಮಾಡಿದ ಪರಿಣಾಮ ಇಂದು ಅವರ ಕುಟುಂಬ ಬೀದಿಗೆ ಬೀಳುವ ಸ್ಥಿತಿಯಲ್ಲಿದೆ. ಹಲ್ಲೆ ಯಿಂದ ಅವರ ಮೂಳೆಗೆ ಪೆಟ್ಟಾಗಿದ್ದು ಮುಂದೆ ಕೆಲಸ ಮಾಡುವ ಸ್ಥಿತಿಯಲ್ಲಿ ಇಲ್ಲ. ಇಷ್ಟಾಗಿಯೂ ಪೋಲಿಸ್ ಇಲಾಖೆ ಪ್ರಕರಣಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಇನ್ನರೆಡು ದಿನದಲ್ಲಿ ಆರೋಪಗಳನ್ನು ಬಂಧಿಸದಿದ್ದರೆ ಬಿಲ್ಲವ ಸಮುದಾಯದ ಜನರನ್ನು ಒಗ್ಗೂಡಿಸಿ ತೀವ್ರ ಪ್ರತಿಭಟನೆ ಗೆ ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಳುಪ ಮನೆತನದ ವಂಶಸ್ಥರಾದ ಡಾ ಅಶೋಕ್ ರಾಜ್ ಜೈನ್ ಮಾತನಾಡಿ, ‘ಶಂಕರ್ ಶಾಂತಿಯವರು ಎಂದೂ ಒಂದು ಧರ್ಮ ಅಥವಾ ಸಮುದಾಯದ ವಿರುದ್ಧ ದನಿ ಎತ್ತಿದವರಲ್ಲ. ರಸ್ತೆ ಸಾರಿಗೆ ಸುರಕ್ಷತೆ ವಿಷಯ, ಕಾಂಕ್ರೀಟ್ ರಸ್ತೆ ಕಳಪೆ ವಿಷಯ, ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು, ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರವನ್ನು ಬಯಲಿಗೆಳೆದಿದ್ದರು.

ರಾಹುಲ್‌ ಅವರೇ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹಿಂದಿರುಗಬೇಕು : ಎಂ.ವೀರಪ್ಪ ಮೊಯ್ಲಿ -Vishwanews24

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ವತಿಯಿಂದ ಸೂಕ್ತ ಕ್ರಮಕೈಗೊಳ್ಳುವಂತೆ ಉಡುಪಿ ಡಿವೈಎಸ್ಪಿ ಸದಾನಂದ ನಾಯ್ಕ’ರಿಗೆ
ಮನವಿಯನ್ನು ಹಸ್ತಾಂತರಿಸಲಾಯಿತು. ಡಿವೈ ಎಸ್ಪಿ ಆರೋಪಿಗಳನ್ನು ವಿರುದ್ಧ ತನಿಖಾಧಿವರಿಗೆ ಕ್ರಮಗೊಳ್ಳುವಂತೆ ಜಿಲ್ಲಾ ವರಿಷ್ಠಾಧಿಕಾರಿಯವರು ಸೂಚನೆ ನೀಡಿದ್ದು ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಪುತ್ತೂರು: ಮಹಿಳಾ ಎಸ್.ಐ ಮೇಲೆ ಹಲ್ಲೆ ಪ್ರಕರಣ ; ಇಬ್ಬರು ಸಹೋದರಿಯರ ಬಂಧನ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

4 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

4 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

4 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

4 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

4 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

19 hours ago