Featured

ಬಾಲಿವುಡ್​​ನ ಪ್ರಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ನಿಧನ – Vishwanews24

ಬಾಲಿವುಡ್​​ನ ಪ್ರಖ್ಯಾತ ಗಾಯಕ, ಸಂಗೀತ ನಿರ್ದೇಶಕ ಬಪ್ಪಿ ಲಹರಿ ನಿಧನ – Vishwanews24

ಮುಂಬೈ: ಬಾಲಿವುಡ್​​ನ ಪ್ರಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ಬಪ್ಪಿ ಲಹರಿ (69) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಪ್ಪಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

1952ರ ನವೆಂಬರ್ 27ರಂದು ಕೋಲ್ಕತ್ತಾದಲ್ಲಿ ಬಪ್ಪಿ ಲಹರಿ ತಮ್ಮ ವಿಭಿನ್ನ ಸಂಗೀತ ಶೈಲಿ ಹಾಗೂ ಅತಿ ಹೆಚ್ಚು ಚಿನ್ನಾಭರಣ ಧರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.

ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ವೃತ್ತಿ ಜೀವನದಲ್ಲಿ ಅನೇಕ ಹಿಟ್ ಹಾಡುಗಳನ್ನು ಹಾಡಿದ್ದಾರೆ. ಹಲವು ರಿಯಾಲಿಟಿ ಶೋಗಳ ತೀರ್ಪುಗಾರರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಬಪ್ಪಿ ಲಹರಿ 1970-80ರ ದಶಕದಲ್ಲಿ ಬಾಲಿವುಡ್‍ನಲ್ಲಿ ಮಿಂಚಿದ ಹಾಡುಗಾರ. ಬಾಲಿವುಡ್‍ನಲ್ಲಿ ಹಲವು ಹಿಟ್ ಹಾಡುಗಳಿಗೆ ಧ್ವನಿಯಾಗಿದ್ದ ಅವರು, 1970-80ರ ದಶಕದಲ್ಲಿ ಸದ್ದು ಮಾಡಿದ್ದ ಚಲ್ತೆ ಚಲ್ತೆ, ಡಿಸ್ಕೋ ಡ್ಯಾನರ್ ಮತ್ತು ಶರಾಬಿ ಮುಂತಾದ ಹಲವಾರು ಜನಮೆಚ್ಚಿದ ಹಾಡುಗಳಿಂದ ಹೆಸರುವಾಸಿಯಾಗಿದ್ದರು. 2020ರಲ್ಲಿ ತೆರೆಕಂಡ ಭಾಗಿ-3 ಚಿತ್ರದ ಟೈಟಲ್ ಸಾಂಗ್ ಬಪ್ಪಿ ಲಹರಿಯವರ ಕಂಠದಲ್ಲಿ ಮೂಡಿಬಂದಿದ್ದು ಇದೇ ಅವರ ಕೊನೆಯ ಹಾಡಾಗಿತ್ತು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

8 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

14 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

15 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

15 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

17 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

17 hours ago