ಮುಂಬೈ: ಬಾಲಿವುಡ್‍ನಲ್ಲಿ ಹಲವಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿದ್ದ ಖ್ಯಾತ ಗಾಯಕ ಭೂಪಿಂದರ್ ಸಿಂಗ್(82) ಅವರು ನಿಧನರಾಗಿದ್ದಾರೆ.
ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಭೂಪಿಂದರ್ ಸಿಂಗ್ ಅವರಿಗೆ ಒಂದು ವಾರದ ಹಿಂದೆಯಷ್ಟೇ ಕೋವಿಡ್-19 ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಮುಂಬೈನ ಅಂಧೇರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ರಾತ್ರಿ 7.45ರ ಸುಮಾರಿಗೆ ಭೂಪಿಂದರ್ ಸಿಂಗ್ ಸಾವನ್ನಪ್ಪಿದ್ದಾರೆ. ಮಂಗಳವಾರ ಅವರ ಅಂತ್ಯಕ್ರಿಯೆಯನ್ನು ನಡೆಸುವುದಾಗಿ ಪತ್ನಿ ಮಿತಾಲಿ ಸಿಂಗ್ ತಿಳಿಸಿದ್ದಾರೆ.
ನಾಮ್ ಗಮ್ ಜಾಯೆಗಾ.., ಹೋತಾ ಪೆ ಐಸಿ ಬಾತ್.., ಕಭಿ ಕಿಸಿ ಕೋ ಮುಕಮ್ಮಲ್ ಜಹಾ ನಹಿ ಮಿಲ್ತಾ.. ಸೇರಿ ಇನ್ನೂ ಹಲವು ಸೂಪರ್ ಹಿಟ್ ಗೀತೆಗಳು ಭೂಪಿಂದರ್ ಸಿಂಗ್ ಅವರ ಕಂಠದಲ್ಲಿ ಮೂಡಿ ಬಂದಿದೆ. ಗಾಯನವನ್ನು ಹೊರತುಪಡಿಸಿ ಭೂಪಿಂದರ್ ಸಿಂಗ್ ಅವರು “ದಮ್ ಮಾರೋ ದಮ್”, “ಚುರಾ ಲಿಯಾ ಹೈ”, “ಚಿಂಗಾರಿ ಕೋಯಿ ಭಡ್ಕೆ” ಮತ್ತು “ಮೆಹಬೂಬಾ ಓ ಮೆಹಬೂಬಾ” ಸೇರಿದಂತೆ ಹಲವಾರು ಜನಪ್ರಿಯ ಹಾಡುಗಳಿಗೆ ಗಿಟಾರ್ ನುಡಿಸಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…