ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ -Vishwanews24

Featured, ರಾಷ್ಟ್ರ ನ್ಯೂಸ್

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ -Vishwanews24

ಮುಂಬೈ : ಕಳೆದ ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಂಗೀತ ನಿರ್ದೇಶಕ, ಚಿಕಿತ್ಸೆ ಫಲಕಾರಿಯಾಗೇ ಗುರುವಾರ ಸಾವನ್ನಪ್ಪಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಂತ ಬಾಲಿವುಡ್ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಅವರಿಗೆ, ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಮುಂಬೈನ ಎಸ್ ಎಲ್ ರೆಹಜಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೋನಾ ನಂತ್ರ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರಿಗೆ ಐಸಿಯುನಲ್ಲಿ ಇರಿಸಿ, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ ಚಿಕಿತ್ಸೆಯ ನಂತ್ರವೂ ಮಧುಮೇಹದಿಂದ ಬಳಲುತ್ತಿದ್ದಂತ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಇಂತಹ ಅವರು, ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಉಡುಪಿ : ಜಲಶಕ್ತಿ ಯೋಜನೆ ಮೂಲಕ ಅಂರ್ತಜಲ ವೃದ್ದಿಸಿ : ದಿನಕರ ಬಾಬು -Vishwanews24

ಅಂದಹಾಗೇ ಮೃತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಸಂಪರ್ಕದಿಂದಾಗಿ ಅವರ ಇಬ್ಬರು ಪುತ್ರರಲ್ಲಿ, ಪುತ್ರ ಸಂಜೀವ್ ರಾಥೋಡ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.