ಮುಂಬೈ : ಮರಾಠಿ ಹಾಗೂ ಹಿಂದಿ ಚಿತ್ರರಂಗದ ಜನಪ್ರಿಯ ಹೆಸರು ರವೀಂದ್ರ ಬೆರ್ಡೆ 78ನೇ ವಯಸ್ಸಿನಲ್ಲಿ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಹಲವು ವರ್ಷಗಳಿಂದ ಗಂಟಲು ಕ್ಯಾನ್ಸರ್ ನಿಂದ ಬಳಲುತ್ತಿದ್ದರು.
ಕಳೆದ ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ದಿನಗಳ ಹಿಂದೆಯಷ್ಟೇ ಡಿಸ್ಚಾರ್ಜ್ ಆಗಿದ್ದರು. ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ.
ಬೆರ್ಡೆ ಅವರು ಅನಿಲ್ ಕಪೂರ್ ಮತ್ತು ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ಬಾಲಿವುಡ್ ನಟರೊಂದಿಗೆ ಕ್ರಮವಾಗಿ ನಾಯಕ್, ದಿ ರಿಯಲ್ ಹೀರೋ ಮತ್ತು ಸಿಂಗಂ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ಇದಲ್ಲದೆ, ಅವರು ಅಶೋಕ್ ಸರಾಫ್, ವಿಜಯ್ ಚವಾಣ್, ವಿಜೂ ಖೋಟೆ ಮತ್ತು ಮಹೇಶ್ ಕೊಠಾರೆ ಮುಂತಾದ ಜನಪ್ರಿಯ ಹೆಸರುಗಳೊಂದಿಗೆ 300 ಕ್ಕೂ ಹೆಚ್ಚು ಮರಾಠಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
1995 ರಲ್ಲಿಯೂ ಇವರು ಹೃದಯಾಘಾತಕ್ಕೆ ಒಳಗಾಗಿದ್ದರು. 2011 ರಲ್ಲಿ, ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಆದರೆ ಅದರ ನಡುವೆಯೂ ಅವರು ಪ್ರೇಕ್ಷಕರನ್ನು ರಂಜಿಸುವುದನ್ನು ಮುಂದುವರೆಸಿದರು. ರವೀಂದ್ರ ಅವರ ಹಾಸ್ಯ ಪಾತ್ರಗಳು ಬಹಳ ಜನಪ್ರಿಯವಾಗಿದ್ದವು.
ರವೀಂದ್ರ ಬೆರ್ಡೆ ಅವರು ಪತ್ನಿ, ಇಬ್ಬರು ಮಕ್ಕಳು, ಸೊಸೆ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…