ಬಾಲಿವುಡ್ ನ ಖ್ಯಾತ ನಟ, ಬಿಗ್ ಬಿ ಅಮಿತಾಭ್ ಬಚ್ಚನ್ ಇಂದು ಬೆಳ್ಳಂಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅವರಿಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗಿದೆ. ಅಮಿತಾಭ್ ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.
81ರ ವಯಸ್ಸಿನ ಅಮಿತಾಭ್ ದಣಿವರಿಯದ ಜೀವ. ಮೊನ್ನೆಯಷ್ಟೇ ಅವರು ಕಲ್ಕಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಮುಂಬೈಗೆ (Mumbai) ಆಗಮಿಸಿದ್ದರು. ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ. ಸತತವಾಗಿ ಕಲ್ಕಿ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ಅವರು, ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದರು.
ದಿಗ್ಗಜರೇ ಒಂದಾಗಿ ನಟಿಸುತ್ತಿರುವ ಕಲ್ಕಿ ಸಿನಿಮಾದ ಬಗ್ಗೆ ಬಿಗ್ ಬಿ, ಎರಡು ದಿನದ ಹಿಂದೆಯಷ್ಟೇ ಬಿಗ್ ಅಪ್ ಡೇಟ್ ನೀಡಿದ್ದರು. ಸಿನಿಮಾ ಶೂಟಿಂಗ್ ಕುರಿತಂತೆ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಮೊನ್ನೆ ರಾತ್ರಿ ಶೂಟಿಂಗ್ ಮುಗಿಸಿ ಬಂದೆ. ಚಿತ್ರದ ಚಿತ್ರೀಕರಣ ಮುಗಿದಿದೆ. ಅಂದುಕೊಂಡಂತೆ ಮೇ 9ಕ್ಕೆ ಚಿತ್ರ ರಿಲೀಸ್ ಆಗಲಿದೆ ಎಂದು ಅವರು ಮಾಹಿತಿಯನ್ನು ಹಂಚಿಕೊಂಡಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…