ಹೊಸದಿಲ್ಲಿ,: ಬಾಲಿವುಡ್‌ನ ಹಿರಿಯ ನಟ ಖಾದರ್ ಖಾನ್ ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆನಡಾದ ಆಸ್ಪತ್ರೆಯೊಂದರಲ್ಲಿ ಸೋಮವಾರ(ಡಿ.31) ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು.
“ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ನನ್ನ ತಂದೆ ಸಂಜೆ 6 ಗಂಟೆಗೆ ಕೆನಡಾ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಮಧ್ಯಾಹ್ನದ ಬಳಿಕ ಕೋಮಾಕ್ಕೆ ಜಾರಿದ್ದರು. ಅವರು ಕಳೆದ 16-17 ವಾರಗಳಿಂದ ಆಸ್ಪತ್ರೆಯಲ್ಲಿದ್ದರು. ಅವರ ಅಂತ್ಯಕ್ರಿಯೆ ಕೆನಡಾದಲ್ಲೇ ನಡೆಯಲಿದೆ. ಎಂದು ಅವರ ಪುತ್ರ ಸರ್ಫರಾಝ್ ತಿಳಿಸಿದ್ದಾರೆ.
ಖಾದರ್ ಖಾನ್ ಕಾಬೂಲ್ ನಲ್ಲಿ ಜನಿಸಿದ್ದು, 1973ರಲ್ಲಿ ತೆರೆಕಂಡ ರಾಜೇಶ್ ಖನ್ನಾ ನಟನೆಯ ದಾಗ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಇದೂವರೆಗೂ 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಖಾದರ್ ಖಾನ್ ಕೆಲವು ಚಿತ್ರಗಳಿಗೆ ಸಂಭಾಷಣೆಯನ್ನು ಬರೆದಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…