Featured

ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ -Vishwanews24

ಮುಂಬಯಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜವಡೇಕರ್ ಅವರು ಟ್ವಿಟ್ಟರ್ ಮೂಲಕ ಈ ವಿಷಯ ಪ್ರಕಟ ಮಾಡಿದ್ದು, ಅಮಿತಾಭ್ ಬಚ್ಚನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ಸುಮಾರು ನಾಲ್ಕು ದಶಕಗಳ ಕಾಲ ಭಾರತೀಯ ಚಿತ್ರರಂಗಕ್ಕೆ ಅಮಿತಾಭ್ ಬಚ್ಚನ್ ನೀಡಿರುವ ಕೊಡುಗೆಯನ್ನ ಗೌರವಿಸಿ ಈ ಪ್ರಶಸ್ತಿ ನೀಡಲಾಗಿದೆ. ಬಿಗ್-ಬಿ ಅವರಿಗೆ ಈಗಾಗಲೇ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ಸಿಕ್ಕಿದೆ. ಈಗ ದಾದಾ ಸಾಹೇಬ್ ಫಾಲ್ಕೆ ಕೂಡ ಅವರ ಮುಡಿಗೇರಿದೆ.

1961ರಲ್ಲಿ ‘ಸಾಥ್ ಹಿಂದೂಸ್ತಾನಿ’ ಚಿತ್ರದಲ್ಲಿ ನಟಿಸುವ ಮೂಲಕ ಅಮಿತಾಭ್ ಬಚ್ಚನ್ ಮೊದಲ ಬಾರಿಗೆ ಬೆಳ್ಳಿತೆರೆ ಪ್ರವೇಶ ಮಾಡಿದರು. ಅಲ್ಲಿಂದ ಆರಂಭವಾದ ಸಿನಿಜರ್ನಿ ನಾಲ್ಕು ದಶಕಗಳ ಕಾಲ ಮುಂದುವರಿದಿದೆ. ಹತ್ತಾರು ಪಾತ್ರಗಳು, ಹತ್ತಾರು ಕಥೆಗಳು, ಹತ್ತಾರು ಗೆಟಪ್ ಗಳ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದಾರೆ.

76ನೇ ವಯಸ್ಸಿನಲ್ಲಿ ವಿಭಿನ್ನ ಪಾತ್ರಗಳನ್ನ ಮಾಡುತ್ತಾ ಈಗಲೂ ಅನೇಕರಿಗೆ ಸ್ಫೂರ್ತಿಯಾಗಿದ್ದಾರೆ. ಹಿಂದಿ ಚಿತ್ರರಂಗದ ದಂತಕಥೆಯಾಗಿರುವ ಬಿಗ್ ಬಿ ಅವರಿಗೆ ಇದುವೆರಗೂ ನಾಲ್ಕು ರಾಷ್ಟ್ರ ಪ್ರಶಸ್ತಿ (ಅಗ್ನಿಪತ್, ಪೀಕು, ಪಾ, ಬ್ಲಾಕ್ ಚಿತ್ರಗಳಿಗೆ) ಲಭಿಸಿದೆ.

2019ನೇ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿದ್ದ ಬದ್ಲಾ ಚಿತ್ರದಲ್ಲಿ ಅಮಿತಾಭ್ ಕೊನೆಯದಾಗಿ ನಟಿಸಿದ್ದರು. ಸದ್ಯ ಚಿರಂಜೀವಿ ನಟನೆಯ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿದ್ದಾರೆ. ಅದರ ಜೊತೆಗೆ ಸಾಕಷ್ಟು ದೊಡ್ಡ ಪ್ರಾಜೆಕ್ಟ್ ಗಳಲ್ಲಿ ನಟಿಸುತ್ತಿದ್ದಾರೆ. ಕಿರುತೆರೆಯಲ್ಲಿ ಕೌನ್ ಬನೆಗಾ ಕರೋಡ್ ಪತಿ ಶೋ ನಿರೂಪಣೆ ಮಾಡುತ್ತಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago