ಭಾರತದ ಬಲು ಜನಪ್ರಿಯ ಧಾರಾವಾಹಿ ‘ಮಹಾಭಾರತ’ದಲ್ಲಿ ಕರ್ಣನ ಪಾತ್ರ ಸೇರಿದಂತೆ ಹಲವಾರು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ನಟ ಪಂಕಜ್ ಧೀರ್ ಇಂದು (ಅಕ್ಟೋಬರ್ 15) ನಿಧನ ಹೊಂದಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಪಂಕಜ್ ಧೀರ್ ಅವರು ಹಲವು ವರ್ಷಗಳಿಂದಲೂ ಕ್ಯಾನ್ಸರ್ ಜೊತೆ ಹೋರಾಡುತ್ತಿದ್ದರು. ಇತ್ತೀಚೆಗಷ್ಟೆ ಕ್ಯಾನ್ಸರ್ ಗಾಗಿ ಪ್ರಮುಖ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ನಿಧನ ಹೊಂದಿದ್ದಾರೆ.
ಪಂಕಜ್ ಅವರು ಹಿಂದಿಯ ಹಲವಾರು ಜನಪ್ರಿಯ ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ ವಿಷ್ಣುವರ್ಧನ್ ಜೊತೆಗೆ ಎರಡು ಕನ್ನಡ ಸಿನಿಮಾಗಳಲ್ಲಿಯೂ ಸಹ ಪಂಜಕ್ ನಟಿಸಿದ್ದಾರೆ. ವಿಷ್ಣುವರ್ಧನ್ ಜೊತೆಗೆ ಬಾಲಿವುಡ್ ಸ್ಟಾರ್ ನಟ ಅಕ್ಷಯ್ ಕುಮಾರ್ ಸಹ ನಟಿಸಿದ್ದ ‘ವಿಷ್ಣು-ವಿಜಯ’ ಸಿನಿಮಾನಲ್ಲಿ ಪಂಕಜ್ ಧೀರ್ ಅವರು ಪ್ರಮುಖವಾದ ಪಾತ್ರದಲ್ಲಿ ನಟಿಸಿದ್ದರು. ಅದಾದ ಬಳಿಕ 2005 ರಲ್ಲಿ ಬಿಡುಗಡೆ ಆದ ‘ವಿಷ್ಣುಸೇನ’ ಸಿನಿಮಾನಲ್ಲಿಯೂ ಸಹ ಡಿಸಿಪಿ ಸಮರ್ಜೀತ್ ಸಿಂಗ್ ಪಾತ್ರದಲ್ಲಿ ಪಂಕಜ್ ಧೀರ್ ನಟಿಸಿದ್ದಾರೆ.
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…