ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ.
ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ಪೌರಾಣಿಕ ನಟರಾದ ಶಾ.ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅ.8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಬರೆದುಕೊಂಡಿದ್ದು, ಪೋಸ್ಟ್ ಹಂಚಿಕೊಂಡಿದ್ದಾರೆ.
ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿಯು ಭಾರತೀಯ ಚಿತ್ರರಂಗಕ್ಕೆ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ, ಶಾ. ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತದೆ ಎಂದಿದ್ದಾರೆ. ಜೊತೆಗೆ ಈ ವರ್ಷದ ಆರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಿಸಲಾಗಿತ್ತು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…