Featured

ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ಗುಜರಾತ್‌ ಶಾಲೆಯಲ್ಲಿ ಹಾಜರಾತಿ ವೇಳೆ ಮಕ್ಕಳು ಜೈಹಿಂದ್‌, ಜೈಭಾರತ್ ಎಂದು ಹೇಳುತ್ತಾರೆ..

ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಉದ್ದೇಶದಿಂದ ಗುಜರಾತ್‌ ಶಾಲೆಯಲ್ಲಿ ಹಾಜರಾತಿ ವೇಳೆ ಮಕ್ಕಳು ಜೈಹಿಂದ್‌, ಜೈಭಾರತ್ ಹೇಳುತ್ತಾರೆ

ಅಹ್ಮದಾಬಾದ್‌ : ಗುಜರಾತ್‌ ಶಾಲಾ ಮಕ್ಕಳು ಇಂದು ಜನವರಿ 1 ರಿಂದ ತರಗತಿ ಶಿಕ್ಷಕರು ಹಾಜರಿ ಕರೆಯುವಾಗ ‘ಪ್ರಸೆಂಟ್‌ ‘ ಎನ್ನುವಂತಿಲ್ಲ. ಅವರು ‘ಜೈಹಿಂದ್‌’ ಅಥವಾ ‘ಜೈ ಭಾರತ್‌’ ಎನ್ನಬೇಕಾಗುತ್ತದೆ.

ಗುಜರಾತಿನ ಪ್ರಾಥಮಿಕ ಮತ್ತು ಹೈಸ್ಕೂಲ್‌ ಶಿಕ್ಷಣದ ನಿರ್ದೇಶನಾಲಯ ಈ ಸಂಬಂಧ ಅಧಿಸೂಚನೆ ಹೊರಡಿಸಿದೆ. ಆ ಪ್ರಕಾರ 1ರಿಂದ 12ನೇ ತರಗತಿಯ ವರೆಗಿನ ವಿದ್ಯಾರ್ಥಿಗಳು ಇಂದಿನಿಂದ ತರಗತಿಯಲ್ಲಿ  ಹಾಜರಿ ಕರೆಯುವಾಗ ಜೈಹಿಂದ್‌ ಅಥವಾ ಜೈ ಭಾರತ್‌ ಎಂದು ಹೇಳುತ್ತಾರೆ.

ಗುಜರಾತಿನ ಅನುದಾನಿತ ಶಾಲೆಗಳು, ಸ್ವಂತ ಹಣಕಾಸಿನ ಶಾಲೆಗಳು ಕೂಡ ಸರಕಾರದ ಈ ಅಧಿಸೂಚನೆಯಂತೆ ನಡೆದುಕೊಳ್ಳಬೇಕಾಗಿದೆ.

ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಹೈಸ್ಕೂಲ್‌ ಗಳಲ್ಲಿ ಈ ಹೊಸ ಪದ್ಧತಿಯನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರುವಂತೆ ಶಿಕ್ಷಕರಿಗೆ, ಶಿಕ್ಷಣಾಧಿಕಾರಿಗಳು ಆದೇಶಿಸಲಾಗಿದೆ.

ಸೋಮವಾರ ನಡೆದ ಸಭೆಯಲ್ಲಿ ಗುಜರಾತ್‌ ಶಿಕ್ಷಣ ಸಚಿವ ಭೂಪೇಂದ್ರಸಿನ್‌ ಚುದಾಸಮ ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ಬಾಲ್ಯದಿಂದಲೇ ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸಲೆಂದು ಈ ಕ್ರಮವನ್ನು ಪರಿಚಯಿಸಲಾಗಿದೆ.

ನೂತನ ಅಧಿಸೂಚನೆಯನ್ನು ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಕಳುಹಿಸಲಾಗಿದ್ದು, ಜ. 1ರಿಂದಲೇ ಜಾರಿಗೆ ಬರುವಂತೆ ನೋಡಿಕೊಳ್ಳಲು ತಿಳಿಸಲಾಗಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

43 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

56 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago