ಬಾಸ್ ಇಸ್ ಅಲ್ವೇಸ್ ರೈಟ್ : ಶೋಭಾ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ BSY ಹೇಳಿಕೆಗೆ CT ರವಿ ಪ್ರತಿಕ್ರಿಯೆ – Vishwanews24

Featured, ರಾಜ್ಯ ನ್ಯೂಸ್

ನಮ್ಮ ಗುರಿ ಒಂದೇ, ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. CT  ರವಿ 

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಚಿಕ್ಕಮಗಳೂರಿನಲ್ಲಿ ಷಡ್ಯಂತ್ರ ಮಾಡಲಾಗುತ್ತಿದೆ ಎಂಬ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪಕ್ಕೆ ಬಿಜೆಪಿ ನಾಯಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಯಡಿಯೂರಪ್ಪ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಹೀಗಾಗಿ ‘ಬಾಸ್ ಈಸ್ ಆಲ್ವೇಸ್ ರೈಟ್’. ನಾನು ಟಿಕೆಟ್ ಕೇಳಿಲ್ಲ ಎಂಬುದನ್ನು ಹತ್ತಾರು ಬಾರಿ ಹೇಳಿದ್ದೇನೆ. ನನಗೆ ಗೊತ್ತಿರುವುದು ಪಕ್ಷ ನಿಷ್ಠೆ ಮತ್ತು ಪರಿಶ್ರಮ ಮಾತ್ರ ಎಂದು ಸಿಟಿ ರವಿ ಹೇಳಿದ್ದಾರೆ.

ಕುಂದಾಪುರ : ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಮೃತ್ಯು – Vishwanews24

‘ನಮ್ಮ ಗುರಿ ಒಂದೇ, ಪ್ರಧಾನಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ನನ್ನ 36 ವರ್ಷದ ರಾಜಕೀಯ ಜೀವನದಲ್ಲಿ ಪಕ್ಷನಿಷ್ಠೆ ಪ್ರಶ್ನಾರ್ಥಕ ಚಿಹ್ನೆಯಾಗಲು ಅವಕಾಶ ಕೊಟ್ಟಿಲ್ಲ. ಪಂಚಾಯತ್​​ನಿಂದ ಪಾರ್ಲಿಮೆಂಟ್ ವರೆಗೂ ಬಿಜೆಪಿ ಗೆಲ್ಲಿಸಬೇಕು ಅಂತ ಹೋರಾಟ ಮಾಡಿದ್ದೇನೆ. ಯಾರು ಯಾರು ಒಂದೊಂದು ಚುನಾವಣೆಯಲ್ಲಿ ಒಂದೊಂದು ತರಹ ವರ್ತನೆ ಮಾಡಿರುತ್ತಾರೋ ಅವರಿಗೆ ಇದು ಅನ್ವಯ ಆಗುತ್ತದೆ’ ಎಂದು ಅವರು ಹೇಳಿದ್ದಾರೆ.

ನಾನು ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೆನೆ. ಚಿಕ್ಕಮಗಳೂರು ಸೇರಿದಂತೆ 28 ಕ್ಷೇತ್ರವನ್ನೂ ಗೆಲ್ಲುತ್ತೇವೆ ಎಂದು ರವಿ ಭರವಸೆ ವ್ಯಕ್ತಪಡಿಸಿದ್ದಾರೆ.

ಗೋ ಬ್ಯಾಕ್​ ಶೋಭಾ ಅಭಿಯಾನ :  ಪೋಸ್ಟರ್​ ಅಂಟಿಸಿದ್ದ ನಾಲ್ವರು ಯುವಕರ ವಿರುದ್ಧ FIR ದಾಖಲು – Vishwanews24

Leave a Reply