ಶ್ರೀಹರಿಕೋಟಾ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಸಾಧನೆ ಮಾಡಿದ್ದು ದೇಶದ ಮೊದಲ ಖಾಸಗಿ ರಾಕೆಟ್ ಅನ್ನು ಇಸ್ರೋ ಯಶಸ್ವಿಯಾಗಿ ಉಡಾಯಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಮ್-ಎಸ್ ಹೆಸರಿನ ಖಾಸಗಿ ರಾಕೆಟ್ ಉಡಾವಣೆ ಮಾಡಲಾಗಿದೆ.
ತೆಲಂಗಾಣ ಮೂಲದ ಟೆಕ್ ಸ್ಟಾರ್ಟ್‌ಅಪ್ ಸ್ಕೈರೂಟ್ ಏರೋಸ್ಪೇಸ್‌ನ ನಿರ್ಮಿಸಿದ್ದ ರಾಕೆಟ್ ಅನ್ನು ಇಸ್ರೋ ಉಡಾಯಿಸಿದೆ. ವಿಕ್ರಮ್-ಎಸ್ ರಾಕೆಟ್ 3 ಚಿಕ್ಕ ಉಪಗ್ರಹಗಳನ್ನು ಅಂತರಿಕ್ಷಕ್ಕೆ ಕೊಂಡೊಯುತ್ತಿದ್ದು ಭೂಮಿಯ ಕಕ್ಷೆಗೆ ಸೇರಿಸಲಿದೆ.
ವಿಕ್ರಮ್-ಎಸ್ ರಾಕೆಟ್ ಏಕ-ಹಂತದ ಉಪ-ಕಕ್ಷೆಯ ಉಡಾವಣಾ ವಾಹನವಾಗಿದ್ದು ಅದು 3 ಗ್ರಾಹಕ ಪೇಲೋಡ್‌ಗಳನ್ನು ಹೊತ್ತೊಯ್ಯುತ್ತದೆ ಮತ್ತು ವಿಕ್ರಮ್ ಸರಣಿಯ ಬಾಹ್ಯಾಕಾಶ ಉಡಾವಣಾ ವಾಹನಗಳಲ್ಲಿನ ಹೆಚ್ಚಿನ ತಂತ್ರಜ್ಞಾನಗಳನ್ನು ಪರೀಕ್ಷಿಸಲು ಮತ್ತು ಮೌಲ್ಯೀಕರಿಸಲು ಸಹಾಯ ಮಾಡುತ್ತದೆ. ವಿಕ್ರಮ್-ಎಸ್ ಉಡಾವಣಾ ವಾಹನದಲ್ಲಿ ಬಳಸಲಾದ ಎಂಜಿನ್‌ಗೆ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಇಡಲಾಗಿದೆ. ಇದನ್ನೂ ಓದಿ: ಕುಂದಾಪುರ: ಕಾರಿಗೆ ಟ್ಯಾಂಕರ್ ಢಿಕ್ಕಿ – Vishwanews24
2018 ರಲ್ಲಿ ಸ್ಥಾಪನೆಯಾದ ಸ್ಕೈರೂಟ್, ಸುಧಾರಿತ ಸಂಯೋಜಿತ ಮತ್ತು 3ಡಿ-ಮುದ್ರಣ ತಂತ್ರಜ್ಞಾನಗಳನ್ನು ಬಳಸಿಕೊಂಡು ಭಾರತದ ಮೊದಲ ಖಾಸಗಿಯಾಗಿ ಅಭಿವೃದ್ಧಿಪಡಿಸಿದ ಕ್ರಯೋಜೆನಿಕ್, ಹೈಪರ್ಗೋಲಿಕ್-ಲಿಕ್ವಿಡ್ ಮತ್ತು ಘನ ಇಂಧನ ಆಧಾರಿತ ರಾಕೆಟ್ ಎಂಜಿನ್ ಅನ್ನು ಯಶಸ್ವಿಯಾಗಿ ತಯಾರಿಸಿ ಪರೀಕ್ಷಿಸಲಾಗಿತ್ತು.
ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್ ಲೈನ್ ಮ್ಯಾಗಜಿನ್ ನಲ್ಲಿ ರಾರಾಜಿಸಿದ ಕನ್ನಡದ ಕಾಂತಾರ – Vishwanews24
ಸ್ಪೇಸ್‌ಕಿಡ್ಜ್ ಇಂಡಿಯಾ, ಬಜೂಮ್ಕ್ ಅರ್ಮೇನಿಯಾ ಹಾಗೂ ಎನ್-ಸ್ಪೇಸ್ ಟೆಕ್ ಇಂಡಿಯಾ ಅಭಿವೃದ್ಧಿಪಡಿಸಿದ 3 ಪೇಲೋಡ್‌ಗಳನ್ನು ವಿಕ್ರಮ್-ಎಸ್ ಹೊತ್ತೊಯ್ದಿದೆ. ಈ ರಾಕೆಟ್ ಅನ್ನು 2 ವರ್ಷಗಳ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ಈ ರಾಕೆಟ್ 6 ಮೀ. ಉದ್ದ, 0.375 ಮೀ. ವ್ಯಾಸ ಹಾಗೂ 545 ಕೆಜಿ ತೂಕವನ್ನು ಹೊಂದಿದೆ.
ಸದ್ಯ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿರುವ ವಿಕ್ರಮ್-ಎಸ್ ರಾಕೆಟ್ 81 ಕಿಮೀ ಎತ್ತರಕ್ಕೆ ಹಾರಲಿದ್ದು, ಭಾರತೀಯ ಬಾಹ್ಯಾಕಾಶ ಕಾರ್ಯಕ್ರಮದ ಪಿತಾಮಹ, ದಿವಂಗತ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ ರಾಕೆಟ್‌ಗೆ ವಿಕ್ರಮ್ ಎಂದು ಹೆಸರಿಡಲಾಗಿದೆ. ಈ ಮಿಶನ್‌ಗೆ ‘ಪ್ರಾರಂಭ’ ಎಂದು ಹೆಸರಿಡಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…