ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಿಚಾರಣೆಗೆ ತಡೆ ನೀಡಿದೆ.
ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂತ್ರಾ ಅವರು ಹೈಕೋರ್ಟ್ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ವಾದ ಆಲಿಸಿದ ಸುಪ್ರೀಂ ವಿಚಾರಣೆಗೆ ತಡೆ ನೀಡಿ ಸಿಐಡಿಗೆ ನೋಟಿಸ್ ಜಾರಿ ಮಾಡಿದೆ.
ಕರ್ನಾಟಕ ಹೈಕೋರ್ಟ್ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ನವೆಂಬರ್ 13ರ ಆದೇಶದ ವಿರುದ್ಧ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಈ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ. ಯಡಿಯೂರಪ್ಪ ಪರವಾಗಿ ಹಿರಿಯ ವಕೀಲರಾದ ಸಿದ್ಧಾರ್ಥ್ ಲೂತ್ರಾ ಮತ್ತು ಸಿದ್ಧಾರ್ಥ್ ದವೆ ವಾದ ಮಂಡಿಸಿದರು. ಕಳೆದ ಫೆಬ್ರವರಿಯಲ್ಲಿ ತನ್ನ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆಯೋರ್ವರು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…