Featured

ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಸೂಚನೆ- ನ್ಯಾಯ ಮಂದಿರ’ದಲ್ಲಿ ಸತ್ಯಕ್ಕೆ ಜಯ : ಬಿವೈ ವಿಜಯೇಂದ್ರ – vishwanews24

ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಸೂಚನೆ- ನ್ಯಾಯ ಮಂದಿರ’ದಲ್ಲಿ ಸತ್ಯಕ್ಕೆ ಜಯ : ಬಿವೈ ವಿಜಯೇಂದ್ರ

ಬೆಂಗಳೂರು: ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸದಂತೆ ಸಿಐಡಿಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ‘ನ್ಯಾಯ ಮಂದಿರ’ದಲ್ಲಿ ಸತ್ಯಕ್ಕೆ ಜಯ ಸಿಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಹೇಳಿದ್ದಾರೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸಿಐಡಿಗೆ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂನ್ 17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಸೂಚಿಸಿದೆ.

ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, ‘ಬಿಎಸ್ ಯಡಿಯೂರಪ್ಪ ಅವರ ಮೇಲಿನ ಕರ್ನಾಟಕದ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣವು ಬಿಎಸ್‌ವೈ ಅವರನ್ನು ಹಿಂಬಾಲಿಸಿಕೊಂಡು ಬರುತ್ತಲೇ ಇದೆ. ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ’ ಎಂದಿದ್ದಾರೆ.

‘ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಚ್ಚ ನ್ಯಾಯಾಲಯವು ಅವರಿಗೆ ಮಧ್ಯಂತರ ಜಾಮೀನು ನೀಡಿ ‘ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ’ ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿಎಸ್ ಯಡಿಯೂರಪ್ಪ ಅವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ’ ಎಂದು ತಿಳಿಸಿದ್ದಾರೆ.ಈ ವರ್ಷದ ಮಾರ್ಚ್ 14 ರಂದು ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಗುರುವಾರ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಪೊಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿತ್ತು. ಪೋಕ್ಸೊ 1ನೇ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನ ನ್ಯಾಯಾಧೀಶರಾದ ರಮೇಶ್ ಅವರು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

17 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago