ಬಿಎಸ್ವೈ ವಿರುದ್ದ ಫೋಕ್ಸ್ ಪ್ರಕರಣ: ಸಿಐಡಿಗೆ ವರ್ಗಾವಣೆ – Vishwanews24
ಬಿಎಸ್ವೈ ವಿರುದ್ದ ಫೋಕ್ಸ್ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.
ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಮೂಡುಬಿದ್ರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಶಿಕ್ಷಕನ ವಿರುದ್ದ ಪ್ರಕರಣ ದಾಖಲು – Vishwanews24
