ಉಡುಪಿ: ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತ ದೇವೇಗೌಡ ಯುಡಿಯೂರಪ್ಪ ಟೆಲಿಫೋನ್ ಮಾತುಕತೆ ವಿಚಾರದ ಬಗ್ಗೆ ನನಗೇನು ತಿಳಿದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಇನ್ನು ಮೈತ್ರಿ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ ಎಂಬ ದೇವೇಗೌಡ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೈತ್ರಿ ಸರಕಾರ ಬೀಳೋಕೆ ಯಾರು ಕಾರಣ ಅನ್ನೋದಿಕ್ಕೆ ಈಗಾಗಲೇ ಉತ್ತರ ಕೊಟ್ಟಿದ್ದೇನೆ. ದೇವೇಗೌಡ್ರು ಆರೋಪ ಮಾಡಿದಷ್ಟೂ ಸಲ ನಾನು ಉತ್ತರ ಕೊಡೋದಿಕ್ಕೆ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.
ಇನ್ನು ಯುಡಿಯೂರಪ್ಪ ಆಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಯುಡಿಯೂರಪ್ಪ ಅವರೇ ಆಡಿಯೋ ತನ್ನದು ಎಂದು ಒಪ್ಪಿಕೊಂಡಿದ್ದಾರೆ. ಅವರು ದಿನಕ್ಕೊಂದು ಹೇಳಿಕೆ ಕೊಟ್ಟರೆ ನಂಬೋದು ಹೇಗೆ? ಈ ಪ್ರಕರಣ ಈಗಾಗಲೇ ಸುಪ್ರೀಂ ಮೆಟ್ಟಲೇರಿದೆ. ನಮ್ಮ ಲಾಯರ್ ಇವತ್ತು ವಾದವನ್ನೂ ಮಂಡಿಸಿದ್ದಾರೆ. ಅಮಿತ್ ಶಾ ಕುಮ್ಮಕ್ಕು ಬಹಿರಂಗವಾಗಿದೆ.ಗೃಹ ಸಚಿವರೇ ಹೀಗೆ ಮಾಡಿದ್ರೆ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯುತ್ತಾ ಎಂದು ಅವರು ಪ್ರಶ್ನಿಸಿದ್ದಾರೆ.
ಇನ್ನು ಸಿದ್ದರಾಮಯ್ಯ ಕಾಂಗ್ರೆಸ್ ನ ಶನಿ ಎಂಬ ಜನಾರ್ಧನ ಪೂಜಾರಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ನೋ ರಿಯಾಕ್ಷನ್ ಟು ಮಿಸ್ಟರ್ ಜನಾರ್ಧನ್ ಪೂಜಾರಿ ಎಂದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…