Featured

ಬಿಎಸ್‍ವೈಗೆ  ತೊಂದರೆ ನೀಡಿದರೆ ಎಲ್ಲಾ ಮಠಾಧೀಶರು ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ : ದೇಶಿಕೇಂದ್ರ ಮಹಾಸ್ವಾಮೀಜಿ -Vishwanews24

ಬಿಎಸ್‍ವೈಗೆ  ತೊಂದರೆ ನೀಡಿದರೆ ಎಲ್ಲಾ ಮಠಾಧೀಶರು ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ : ದೇಶಿಕೇಂದ್ರ ಮಹಾಸ್ವಾಮೀಜಿ -Vishwanews24

ಹಿರಿಯರಾಗಿದ್ದರೂ 18 ವರ್ಷದ ಯುವಕನಂತೆ ಯಡಿಯೂರಪ್ಪ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ

 

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತಮ ಆಡಳಿತ ನೀಡುತ್ತಿದ್ದಾರೆ. ಒಂದು ವೇಳೆ ಅವರಿಗೆ ಕೇಂದ್ರ ಅಥವಾ ರಾಜ್ಯದವರು ತೊಂದರೆ ನೀಡಿದರೆ ಎಲ್ಲಾ ಮಠಾಧೀಶರು ರಾಜ್ಯವ್ಯಾಪಿ ಹೋರಾಟ ನಡೆಸುತ್ತೇವೆ ಎಂದು ಪ್ರಗತಿಪರ ಮಠಾಧೀಶರ ವೇದಿಕೆ ರಾಜ್ಯ ಕಾರ್ಯಧ್ಯಕ್ಷ ಶ್ರೀಶೈಲ ಸಾರಂಗ ಮಠದ ಪೀಠಾಧಿಪತಿ ಡಾ.ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಯಡಿಯೂರಪ್ಪ ಅವರು ಕೇವಲ ಲಿಂಗಾಯತ ನಾಯಕರಲ್ಲ, ಎಲ್ಲ ಜಾತಿ ಸಮುದಾಯದ ನಾಯಕರಾಗಿದ್ದಾರೆ. ಅವರು ಬಿಜೆಪಿಯನ್ನು ಬೇರು ಮಟ್ಟದಿಂದ ಬೆಳೆಸಿ ಸಿಎಂ ಆಗಿದ್ದಾರೆ. ಆದರೆ ಅವರನ್ನು ಅಧಿಕಾರದಿಂದ ಇಳಿಸಲು ಕೆಳಗಿಳಿಸಲು ಯೋಚಿಸಿದರೆ ಪ್ರಖರ ಹೋರಾಟ ನಡೆಸಬೇಕಾಗುತ್ತದೆ. ಹಿರಿಯರಾಗಿದ್ದರೂ 18 ವರ್ಷದ ಯುವಕನಂತೆ ಯಡಿಯೂರಪ್ಪ ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಪಕ್ಷದಲ್ಲಿ ಯಡಿಯೂರಪ್ಪ ಪರ ವಿರೋಧ ಚಟುವಟಿಕೆ ನಡೆದಿವೆ.ಅವರು ಎಲ್ಲ ನಾಯಕರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಮನೋಭಾವ ಹೊಂದಿದ್ದಾರೆ ಎಂದಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಬಾಕಿ ಉಳಿದ ಎರಡು ವರ್ಷ ಅವಧಿ ಪೂರ್ಣಗೊಳಿಸಲು ಬಿಡಬೇಕು. ಒಂದು ವೇಳೆ ಏನಾದರೂ ಅವರನ್ನು ಕೆಳಗಿಳಿಸುವ ಪ್ರಯತ್ನ ನಡೆದರೆ ಪರಿಸ್ಥಿತಿ ನೆಟ್ಟಗಿರಲ್ಲ. ಇಂತಹ ಪರಿಸ್ಥಿತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದವರು ತರಬಾರದು ಎಂದು ಸಾರಂಗಧರ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

12 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

20 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

24 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago